ಪ್ರಧಾನ ಸುದ್ದಿ

ಜಿಎಸ್‏ಟಿ ಕುರಿತು ಸೋನಿಯಾ, ಮನ್ ಮೋಹನ್ ಜೊತೆ ಮೋದಿ ಚರ್ಚೆ ಇಂದು

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಸೂದೆಗೆ ಸಂಬಂಧಿಸಿದಂತೆ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳುವ ಸಲುವಾಗಿ...

ಜಿಎಸ್‏ಟಿ ಕುರಿತು ಸೋನಿಯಾ, ಮನ್ ಮೋಹನ್ ಜೊತೆ ಮೋದಿ ಚರ್ಚೆ ಇಂದು
ನರೇಂದ್ರ ಮೋದಿ-ಸೋನಿಯಾ ಗಾಂಧಿ- ಮನ್ ಮೋಹನ್ ಸಿಂಗ್
Published On :
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‏ಟಿ) ಮಸೂದೆಗೆ ಸಂಬಂಧಿಸಿದಂತೆ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರನೊಡನೆ ಇಂದು ಮಾತುಕತೆ ನಡೆಸಲಿದ್ದಾರೆ.
ಶುಕ್ರವಾರ ಸಂಜೆ ಚಹಾ ಕೂಟಕ್ಕೆ ಸೋನಿಯಾ ಗಾಂಧಿ ಮತ್ತು ಮನ್ ಮೋಹನ್ ಸಿಂಗ್  ಅವರನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಭೇಟಿ ವೇಳೆ ಜಿಎಸ್ ಟಿ ಮಸೂದೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಹಾಗೂ ವಿವಾದಿತ ಅಂಶಗಳನ್ನು ಚರ್ಚಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. 
ಜಿಎಸ್ ಟಿ ಮಸೂದೆಗೆ ಸಂಬಂಧಿಸಿ ಪ್ರಧಾನಿ ಮೋದಿ ಎಲ್ಲರೊಂದಿಗೆ ಚರ್ಚೆ ನಡೆಸುತ್ತಾರೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದರು. ಆದರೆ, ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಯಾವುದೇ ಭರವಸೆ ನೀಡದಿರುವ ಹಿನ್ನಲೆಯಲ್ಲಿ ಪ್ರಧಾನಿ ಖುದ್ದಾಗಿ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. 
ಪ್ರಧಾನಿ ಮೋದಿ ವಿದೇಶಿ ಪ್ರವಾಸದ ವೇಳೆ, ಜಿಎಸ್ ಟಿ ಜಾರಿಗೆ ತರುವುದಾಗಿ ವಿದೇಶಿ ಹೂಡಿಕೆದಾರರಿಗೆ ಭರವಸೆ ನೀಡಿದ್ದರು. ಜಿಎಸ್ ಟಿ ಗೆ ಸಂಬಂಧಿಸಿದ ಮೋದಿ ಸರ್ಕಾರದ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿ ಕಾಂಗ್ರೆಸ್ ಕಳೆದ ಅಧಿವೇಶನದಿಂದ ವಿರೋಧ ವ್ಯಕ್ತ ಪಡಿಸಿಕೊಂಡು ಬಂದಿತ್ತು. ಈ ಮಸೂದೆಯನ್ನು ಕೆಲವು ರಾಜ್ಯಗಳೂ ಕೂಡ ವಿರೋಧಿಸಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.