ಮೋದಿ ಅವರ ಟೊಳ್ಳು ಭರವಸೆಗಳಲ್ಲಿ ಜನರಿಗೆ ವಿಶ್ವಾಸವಿಲ್ಲ: ಸೋನಿಯಾ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ ಟೊಳ್ಳು ಭರವಸೆಗಳಲ್ಲಿ ಜನರಿಗೆ ವಿಶ್ವಾಸವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ಟೊಳ್ಳು ಭರವಸೆಗಳಲ್ಲಿ ಜನರಿಗೆ ವಿಶ್ವಾಸವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಬಿಹಾರದಲ್ಲಿ ಮೊದಲ ಚುನಾವಣಾ ಭಾಷಣವನ್ನುದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಬಿಹಾರದ ಚುನಾವಣಾ ಫಲಿತಾಂಶ ದೇಶಕ್ಕೆ ಹೊಸ ದಿಕ್ಕನ್ನು ತೋರಿಸಲಿದೆ, ಜೆಡಿಯು ನೇತೃತ್ವದ ಮೈತ್ರಿಗೆ ಮತ ನೀಡಿ ನರೇಂದ್ರ ಮೋದಿ ಅವರ ಟೊಳ್ಳು ಭರವಸೆಗಳಿಂದ ಮುಕ್ತಿ ಪಡೆಯಿರಿ ಎಂದು ಸೋನಿಯಾ ಗಾಂಧಿ ಜನರಿಗೆ ಕರೆ ನೀಡಿದ್ದಾರೆ.
ಪ್ರಧಾನಿ ಮೋದಿ ಭಾರತದಲ್ಲಿರುವ ಬದಲು ಹೆಚ್ಚಿನ ಸಮಯ ವಿದೇಶದಲ್ಲೇ ಕಳೆಯುತ್ತಾರೆ. ಕೈಗಾರಿಕೋದ್ಯಮಿಗಳಿಗಾಗಿ ಮಾತ್ರ ಮೋದಿ ಸರ್ಕಾರ ಕಾರನಿರ್ವಹಿಸುತ್ತಿದ್ದು, ಸರ್ಕಾರ ಬಡವರ- ರೈತರ ವಿರೋಧಿ ಎಂದು ಅರೋಪಿಸಿದ್ದಾರೆ.
ಸರ್ಕಾರದ ತಪ್ಪು ನೀತಿಗಳಿಂದಾಗಿ ದೇಶದಲ್ಲಿ ಹಣದುಬ್ಬರ ಉಂಟಾಗುತ್ತಿದ್ದು, ನಿರುದ್ಯೋಗ ಯುವಕರ ಸೇನೆಯೇ ಸೃಷ್ಟಿಯಾಗುತ್ತಿದೆ. ದಲಿತರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವುದು ಸಂವಿಧಾನಾತ್ಮಕ ಹಕ್ಕಾಗಿದ್ದು ಅದನ್ನು ಯಾರೀಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


