ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸುತ್ತೇನೆ: ನೆಹರು ಸೋದರ ಸೊಸೆ ನಯನತಾರ ಸೈಗಲ್
ಕೇಂದ್ರ ಸರ್ಕಾರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಲು ವಿಫಲವಾಗಿದೆ ಎಂದು ದೂರಿ ಹಿರಿಯ ಬರಹಗಾರ್ತಿ, ಜವಾಹರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್

ನವದೆಹಲಿ: ಕೇಂದ್ರ ಸರ್ಕಾರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಲು ವಿಫಲವಾಗಿದೆ ಎಂದು ದೂರಿ ಹಿರಿಯ ಬರಹಗಾರ್ತಿ, ಜವಾಹರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್ ಅವರು ಪ್ರಖ್ಯಾತ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.
೮೮ ವರ್ಷದ ಸೈಗಲ್ ಅವರು ೧೯೮೬ರಲ್ಲಿ ಈ ಪ್ರಶಸ್ತಿ ಪಡೆದಿದ್ದರು.
ಅವರು ತಮ್ಮ ಇತ್ತೀಚಿನ ಪುಸ್ತಕದಲ್ಲಿ, ಹಿಂದುತ್ವ ಸಿದ್ಧಾಂತವನ್ನು ವಿರೋಧಿಸಿದವರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡಲು ವಿಫಲವಾಗಿದೆ ಎಂದು ದೂರಿದ್ದರು ಹಾಗು ವಿರೋಧಿಸುವುದು ಭಾರತೀಯ ಸಂವಿಧಾನದ ಮೂಲ ಹಕ್ಕುಗಳಲ್ಲಿ ಒಂದು ಎಂದಿರುವ ಅವರು ಭಾರತದ ಸಾಂಸ್ಕೃತಿಕ ವೈವಿಧ್ಯತೆ ಆತಂಕದಲ್ಲಿದೆ ಎಂದಿದ್ದಾರೆ.
ಇತ್ತೀಚೆಗಷ್ಟೇ ಕನ್ನಡ ಸಂಶೋಧಕ ಎಂ ಎಂ ಕಲ್ಬುರ್ಗಿ ಅವರ ಹತ್ಯೆಯನ್ನು ವಿರೋಧಿಸಿ ಹಿಂದಿ ಲೇಖಕ ಉದಯ್ ಪ್ರಕಾಶ್ ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದನ್ನು ನೆನಪಿಸಿಕೊಳ್ಳಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


