ಬೆಂಗಳೂರಿನಲ್ಲಿ ಗ್ಯಾಂಗ್‌ರೇಪ್: ಆರೋಪಿಗಳು ಅ.20ರವರೆಗೆ ಪೊಲೀಸ್ ವಶಕ್ಕೆ
ಕಾಲ್‌ಸೆಂಟರ್ ಉದ್ಯೋಗಿ ಮೇಲೆ ಟಿಟಿ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು...

ಬೆಂಗಳೂರು: ಕಾಲ್‌ಸೆಂಟರ್ ಉದ್ಯೋಗಿ ಮೇಲೆ ಟಿಟಿ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು ಅಕ್ಟೋಬರ್ 20ರವರೆಗೆ 3ನೇ ಎಸಿಎಂಎಂ ಕೋರ್ಟ್ ಪೊಲೀಸ್ ವಶಕ್ಕೆ ನೀಡಿದೆ.
ಆರೋಪಿಗಳಾದ ಸುನೀಲ್ ಹಾಗೂ ಯೋಗೇಶ್‌ನನ್ನು ಇಂದು ಬೆಳಗ್ಗೆ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕ ಪೊಲೀಸರು ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್ ಪ್ರಭು ಅವರು, ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಮಧ್ಯಪ್ರದೇಶ ಮೂಲದ 22 ವಷದ ಬಿಪಿಒ ಉದ್ಯೋಗಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಟೆಂಪೋ ಟ್ರಾವೆಲರ್ ಗೆ ಹತ್ತಿಸಿಕೊಂಡು ಈ ಇಬ್ಬರು ಕಾಮುಕರು ಸತತ ನಾಲ್ಕು ಗಂಟೆಗಳ ಕಾಲ ಚಲಿಸುವ ವಾಹನದಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದ ಸುನೀಲ್(23) ಹಾಗೂ ಲಕ್ಯಾ ಹೋಬಳಿ ಸಿಂದಗೇರಿ ಗ್ರಾಮದ ಯೋಗೇಶ್(27) ಎಂಬುವವರನ್ನು ನಿನ್ನೆ ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


