ಸಾಮರಸ್ಯ ಕದಡುವವರ ಮೇಲೆ ಶಿಸ್ತು ಕ್ರಮ: ರಾಜನಾಥ್ ಸಿಂಗ್
ದೇಶದಲ್ಲಿ ಕೋಮು ಸಾಮರಸ್ಯವನ್ನು ಹಾಳುಗೆಡವುವರ ಮೇಲೆ ಅತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ಬೀಫ್ ತಿಂದರು

ನವದೆಹಲಿ: ದೇಶದಲ್ಲಿ ಕೋಮು ಸಾಮರಸ್ಯವನ್ನು ಹಾಳುಗೆಡವುವರ ಮೇಲೆ ಅತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ಬೀಫ್ ತಿಂದರು ಎಂಬ ವದಂತಿಯ ಮೇರೆಗೆ ಉತ್ತರ ಪ್ರದೇಶದ ದಾದ್ರಿಯಲ್ಲಿ ಒಬ್ಬನನ್ನು ಕೊಂದ ಘಟನೆ ದೇಶದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲಿ ಗೃಹಮಂತ್ರಿ ಈ ಎಚ್ಚರಿಕೆ ನೀಡಿದ್ದಾರೆ.
"ರಾಜ್ಯ ಸರ್ಕಾರವೇ ಆಗಲಿ, ಕೇಂದ್ರ ಸರ್ಕಾರವೇ ಆಗಲಿ, ದೇಶದಲ್ಲಿ ಕೋಮು ಸಾಮರಸ್ಯವನ್ನು ಹಾಳುಗೆಡವುವರ ಮೇಲೆ ಅತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು" ಎಂದು ಕಾರ್ಯಕ್ರಮವೊಂದರಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.
ಬೀಫ್ ತಿಂದರು ಎಂಬ ವದಂತಿಯ ಮೇರೆಗೆ ಉತ್ತರ ಪ್ರದೇಶದ ದಾದ್ರಿಯಲ್ಲಿ ಮುಸ್ಲಿಂ ಸಮುದಾಯದ ಒಬ್ಬನನ್ನು ಕೊಂದ ಘಟನೆ ಬಗ್ಗೆ ಉಂಟಾಗಿರುವ ಉದ್ವಿಘ್ನತೆ ಬಗ್ಗೆ ಪ್ರಶ್ನಿಸಿದಾಗ ಗೃಹ ಮಂತ್ರಿಯವರು ಹೀಗೆ ಉತ್ತರಿಸಿದ್ದಾರೆ.
ನೆನ್ನೆಯಷ್ಟೇ ಈ ಘಟನೆಯನ್ನು ದುರದೃಷ್ಟಕರ ಎಂದಿದ್ದ ಗೃಹಮಂತ್ರಿ ಕೋಮು ಸ್ವಾರಸ್ಯ ಎಲ್ಲರ ಕರ್ತವ್ಯ ಎಂದು ಹೇಳಿದ್ದರು. ಅಲ್ಲದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಹಾಗು ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅಕ್ಟೋಬರ್ ೧ ರಂದು ಪತ್ರ ಬರೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


