ಸಿಎಂಗೆ ಆಹ್ವಾನ ಇಲ್ಲ ಕಾಂಗ್ರೆಸ್ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಜರ್ಮನಿ ಚಾನ್ಸ್‍ಲರ್ ಭಾಗವಹಿಸಿದ್ದ ನಾಸ್‍ಕಾಮ್ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ನೀಡದೆ ಶಿಷ್ಠಾಚಾರ ಉಲ್ಲಂಘಿಸಿದ ನಾಸ್‍ಕಾಮ್ ವಿರುದ್ಧಛಿ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಜರ್ಮನಿ ಚಾನ್ಸ್‍ಲರ್ ಭಾಗವಹಿಸಿದ್ದ ನಾಸ್‍ಕಾಮ್ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ನೀಡದೆ ಶಿಷ್ಠಾಚಾರ ಉಲ್ಲಂಘಿಸಿದ ನಾಸ್‍ಕಾಮ್ ವಿರುದ್ಧ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ನಾಸ್‍ಕಾಮï ಕಚೇರಿಗೆ ಗುರುವಾರ ಮುತ್ತಿಗೆ ಹಾಕಿ ಬೀಗ ಜಡಿದು ಘೋಷಣೆ ಕೂಗಿದರು. ಕನ್ನಡದ ನೆಲ, ಜಲ ಮತ್ತು ಉದ್ಯೋಗಿಗಳನ್ನು ಬಳಸಿಕೊಂಡು ಸಾವಿರಾರು ಕೋಟಿ ರುಪಾಯಿ ಸಂಪಾದನೆ ಮಾಡುತ್ತಿರುವ ನಾಸ್‍ಕಾಮï ಉದ್ಯಮಿಗಳು
ಮುಖ್ಯಮಂತ್ರಿಗೆ ಆಮಂತ್ರಣ ನೀಡದೆ ಶಿಷ್ಠಾಚಾರ ಉಲ್ಲಂಘಿಸಿ ಅವಮಾನ ಮಾಡಿದ್ದಾರೆ.
ಇದರಿಂದ ಕನ್ನಡದ ಜನತೆಗೆ ಅವಮಾನವಾಗಿದೆ ಎಂದು ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯಗೆ ಆಹ್ವಾನ ನೀಡದೆ ನಿರ್ಲಕ್ಷ್ಯ ತೊರಿರುವ ನಾಸ್ಕಾಂ ಹಿಂದೆ ಮೋದಿ ಅವರ ಕೈವಾಡ ಇದೆ. ಪ್ರಧಾನಿ, ಕೇವಲ ಶ್ರೀಮಂತ ವರ್ಗದ ಕಡೆ ಗಮನ ನೀಡುತ್ತಿದ್ದಾರೆ. ಬಡವರ ಬಗ್ಗೆ ಕಾಳಜಿ ಇಲ್ಲ. ಹೀಗಾಗಿ, ಮುಂದೆ ರಾಜ್ಯಕ್ಕೆ ಪ್ರಧಾನಿ ಬಂದಾಗ ಆಹ್ವಾನಿಸಲು ವಿಮಾನ ನಿಲ್ದಾಣಕ್ಕೂ ಹೋಗದಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಸೋಮಶೇಖರ್ ಸುದ್ದಿಗಾರರಿಗೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

