ಕುಲಕರ್ಣಿ ಮುಖಕ್ಕೆ ಮಸಿ, ಶಿವಸೇನೆ ಕೃತ್ಯ ಖಂಡಿಸಿದ ಆಡ್ವಾಣಿ
ತಮ್ಮ ಮಾಜಿ ಆಪ್ತ ಸುಧೀಂದ್ರ ಕುಲಕರ್ಣಿಯವರ ಮುಖಕ್ಕೆ ಮಸಿ ಬಳೆದ ಶಿವಸೇನೆ ಕಾರ್ಯಕರ್ತರು ಕೃತ್ಯವನ್ನು ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ...

ಮುಂಬೈ: ತಮ್ಮ ಮಾಜಿ ಆಪ್ತ ಸುಧೀಂದ್ರ ಕುಲಕರ್ಣಿಯವರ ಮುಖಕ್ಕೆ ಮಸಿ ಬಳೆದ ಶಿವಸೇನೆ ಕಾರ್ಯಕರ್ತರು ಕೃತ್ಯವನ್ನು ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ತೀವ್ರವಾಗಿ ಖಂಡಿಸಿದ್ದಾರೆ.
ದೇಶದ ಜನತೆ ತಾಳ್ಮೆ ಕಳೆದುಕೊಳ್ಳುತ್ತಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಯಾವುದೇ ಹೋರಾಟ ಕಾನೂನು ವ್ಯಾಪ್ತಿಯೊಳಗಿರಬೇಕು. ಇಂತಹ ಕೃತ್ಯ ಯಾರೇ ಎಸಗಿರಲಿ ಅಥವಾ ಯಾವುದೇ ಸಂಘಟನೆ ಎಸಗಿರಲಿ. ಅದನ್ನು ತಾವು ಖಂಡಿಸುವುದಾಗಿ ಆಡ್ವಾಣಿ ಹೇಳಿದ್ದಾರೆ.
ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಕಸೌರಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ವಿರೋಧಿಸಿ ಕಾರ್ಯಕ್ರಮ ಆಯೋಜ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿದ್ದರು.
ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದರಿಂದ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಕಸೌರಿಯವರ ಪುಸ್ತಕ ಬಿಡುಗಡೆ ಸಮಾರಂಭವನ್ನು ರದ್ದುಗೊಳಿಸಬೇಕು ಎಂದು ಶಿವಸೇನೆ, ನೆಹರು ಪ್ಲ್ಯಾನಿಟೋರಿಯಂ ಅಧಿಕಾರಿಗಳಿಗೆ ಮನವಿಯೂ ಸಲ್ಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


