ಪ್ರಶಸ್ತಿ ಹಿಂದಿರುಗಿಸದೆ ಪ್ರತಿಭಟನೆ ನಡೆಸಲು ಗೋವಾ ಸಾಹಿತಿಗಳ ನಿರ್ಧಾರ
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವ್ಯಕ್ತವಾಗುತ್ತಿರುವ ಅಸಹನೆಯ ಸಂಸ್ಕೃತಿಯನ್ನು ಖಂಡಿಸಿರುವ ಗೋವಾ ಬರಹಗಾರರು, ಪ್ರಶಸ್ತಿ ಹಿಂದಿರುಗಿಸುವುದಿಲ್ಲ ಎಂದು ಗುರುವಾರ

ಪಣಜಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವ್ಯಕ್ತವಾಗುತ್ತಿರುವ ಅಸಹನೆಯ ಸಂಸ್ಕೃತಿಯನ್ನು ಖಂಡಿಸಿರುವ ಗೋವಾ ಬರಹಗಾರರು, ಪ್ರಶಸ್ತಿ ಹಿಂದಿರುಗಿಸುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.
ಪಣಜಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ೧೧ ಕೊಂಕಣಿ ಭಾಷೆಯ ಪ್ರಶಸ್ತಿ ವಿಜೇತರು ಈ ನಿರ್ಧಾರ ಪ್ರಕಟಿಸಿದ್ದಾರೆ.
"ಸಂಶೋಧಕ ಎಂ ಎಂ ಕಲ್ಬುರ್ಗಿ ಅವರ ಕೊಲೆಯ ಬಗ್ಗೆ ಸಾಹಿತ್ಯ ಅಕಾಡೆಮಿ ಯಾವುದೇ ಪ್ರತಿಕ್ರಿಯೆ ತೋರದೆ ಇರುವುದು ಆಘಾತವಾಗಿದೆ. ನಾವು ಪ್ರಶಸ್ತಿಯನ್ನು ಹಿಂದಿರುಗಿಸುವುದು ಬೇಡವೆಂದು ನಿರ್ಧರಿಸಿದ್ದರು ನಮ್ಮ ಭಾವನೆಗಳನ್ನು ಸಾಹಿತ್ಯ ಅಕಾಡೆಮಿಗೆ ತಿಳಿಸಲಿದ್ದೇವೆ. ಸಂಸ್ಥೆ ಆಯೋಜಿಸುವ ಸಭೆಯಲ್ಲಿ ಇದರ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸುತ್ತೇವೆ" ಎಂದು ಸಾಹಿತಿ ದಾಮೋದರ್ ಮೌಜೋ ತಿಳಿಸಿದ್ದಾರೆ.
ಈ ಪತ್ರಿಕಾ ಗೋಷ್ಠಿಯಲ್ಲಿ ಪುಂಡಲೀಕ್ ನಾಯಕ್, ದಿಲೀಪ್ ಬೋರ್ಕರ್, ದತ್ತ ನಾಯಕ್, ಹೇಮಾ ನಾಯಕ್, ನಾಗೇಶ್ ಕರ್ಮಾಲಿ, ಎನ್ ಶಿವದಾಸ್ ಕೂಡ ಮಾತನಾಡಿದ್ದಾರೆ. ಇವರೆಲ್ಲರೂ ಕೊಂಕಣಿ ಸಾಹಿತ್ಯಕ್ಕೆ ಈ ಪ್ರತಿಷ್ಟಿತ ಪ್ರಶಸ್ತಿ ಪಡೆದವರು.
೪೬ ನೆ ಗೋವಾ ಅಂತರಾಷ್ಟ್ರೀಯ ಸಿನೆಮೋತ್ಸವದ ವೇಳೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಕೂಡ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


