ಕಲಾಂ ಮೊದಲು ರಾಷ್ಟ್ರ ರತ್ನ, ನಂತರ ರಾಷ್ಟ್ರಪತಿ: ಪ್ರಧಾನಿ ಮೋದಿ
ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ 84ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕಲಾಂ ಅವರ...

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ 84ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕಲಾಂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಬಳಿಕ 'ಎ ಸೆಲೆಬ್ರೆಷನ್ ಆಫ್ ಡಾ.ಕಲಾಂ ಲೈಫ್' ಎಂಬ ಛಾಯಾಚಿತ್ರ ಪ್ರದರ್ಶನಕ್ಕೂ ಚಾಲನೆ ನೀಡಿ ಮಾತನಾಡಿದ ಪ್ರಧಾನಿ, ಡಾ.ಕಲಾಂ ಅವರು ಮೊದಲು 'ರಾಷ್ಟ್ರರತ್ನ'ವಾಗಿದ್ದರು. ಬಳಿಕ ಅವರು ರಾಷ್ಟ್ರಪತಿಯಾದರು ಎಂದು ಹೇಳಿದರು.
ಕಲಾಂ ಅವರು ಯಾವಾಗಲೂ ಸವಾಲುಗಳನ್ನು ಸ್ವೀಕರಿಸುತ್ತಿದ್ದರು ಮತ್ತು ಅವುಗಳಿಂದ ಹೊರ ಬರುವುದು ಹೇಗೆ ಎಂಬ ಬಗ್ಗೆ ಚಿಂತನೆ ಮಾಡುತ್ತಿದ್ದರು ಎಂದು ಪ್ರಧಾನಿ ಹೇಳಿದರು.
ಇದೇ ವೇಳೆ, ಕಲಾಂ ಅವರ ಹುಟ್ಟೂರು ರಾಮೇಶ್ವರಂನಲ್ಲಿ ಸರ್ಕಾರ ಭೂಸ್ವಾಧೀನ ಮಾಡಿಕೊಂಡಿದ್ದು, ಮಾಜಿ ರಾಷ್ಟ್ರಪತಿಯ ಸ್ಮಾರಕ ನಿರ್ಮಿಸಲಾಗುವುದು ಎಂದು ಮೋದಿ ಘೋಷಿಸಿದರು.
ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಕಲಾಂ ಅವರು ಕಳೆದ ಜುಲೈನಲ್ಲಿ ನಿಧನರಾದರು. ಅವರು 2002ರಿಂದ 2007ರವರೆಗೆ ದೇಶದ 11ನೇ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


