ಸಕಲ ಸರ್ಕಾರಿ ಗೌರವದೊಂದಿಗೆ ಎಸ್ಐ ಜಗದೀಶ್ ಅಂತ್ಯಕ್ರಿಯೆ
ನಿನ್ನೆಯಷ್ಟೇ ಬೈಕ್ ಕಳ್ಳರಿಂದ ಹತ್ಯೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಸ್.ಜಗದೀಶ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರಾದ ಮಾಗಡಿ ತಾಲೂಕಿನ ಮಲ್ಲಾಪುರ ಪಾಳ್ಯದಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು...

ಬೆಂಗಳೂರು: ನಿನ್ನೆಯಷ್ಟೇ ಬೈಕ್ ಕಳ್ಳರಿಂದ ಹತ್ಯೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಸ್.ಜಗದೀಶ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರಾದ ಮಾಗಡಿ ತಾಲೂಕಿನ ಮಲ್ಲಾಪುರ ಪಾಳ್ಯದಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು.
ಭದ್ರತೆಗಾಗಿ ಅಂತ್ಯಕ್ರಿಯೆ ವೇಳೆ 500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ನಿಯೋಜನೆ ಮಾಡಲಾಗಿತ್ತು. ಅಂತ್ಯಕ್ರಿಯೆ ವೇಳೆ ನೆರೆದಿದ್ದ ಗಣ್ಯರು, ಸರ್ಕಾರಿ ಅಧಿಕಾರಿಗಳು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಸಕಲ ಸರ್ಕಾರಿ ಗೌರವಗಳಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಜಗದೀಶ್ ಅವರ ಸ್ವಂತ ಜಮೀನಿನಲ್ಲಿ ಧಾರ್ಮಿಕ ವಿಧಿವಿಧಾಗಳ ಬಳಿಕ ಮಣ್ಣು ಮಾಡಲಾಯಿತು. ಈ ವೇಳೆ ದುಃಖತಪ್ತ ಜಗದೀಶ್ ಅವರ ಕುಟುಂಬವರ್ಗದ ಆಕ್ರಂದನ ಮುಗಿಲುಮುಟ್ಟಿತ್ತು.
ಜಗದೀಶ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ
ಎಸ್ಐ ಜಗದೀಶ್ ಅವರ ಹತ್ಯೆಗೆ ಈಗಾಗಲೇ ಸಂತಾಪ ಸೂಚಿಸಿರುವ ರಾಜ್ಯ ಸರ್ಕಾರವು ಜಗದೀಶ್ ಅವರ ಕುಟುಂಬಕ್ಕೆ ಪರಿಹಾರ ಧನವಾಗಿ 50 ಲಕ್ಷ ರೂಪಾಯಿಗಳನ್ನು ಘೋಷಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು, ಸರ್ಕಾರದ ಕಡೆಯಿಂದ ಜಗದೀಶ್ ಕುಟುಂಬದವರಿಗೆ 50 ಲಕ್ಷ ನೀಡಲಾಗುತ್ತಿದ್ದು, ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಮತ್ತು ನಿವೇಶನ ನೀಡಲಾಗುತ್ತಿದೆ. ಅಲ್ಲದೆ, ಜಗದೀಶ್ ಅವರ ಮಕ್ಕಳ ಸಂಪೂರ್ಣ ವಿದ್ಯಾಬ್ಯಾಸದ ವೆಚ್ಚವನ್ನು ಕೂಡ ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.
ನೆಲಮಂಗಲ ತಾಲೂಕು ಭಿನ್ನಮಂಗಲ ಬಳಿಯ ವಿನಾಯಕ ನಗರ ಬಡಾವಣೆಯಲ್ಲಿ ನಿನ್ನೆ ಮಧ್ಯಾಹ್ನ ಜಗದೀಶ್ ಅವರನ್ನು ಬೈಕ್ ಕಳ್ಳರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಇದೇ ವೇಳೆ, ಇನ್ಸ್ಸ್ಪೆಕ್ಟರ್ ಜತೆ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸ್ ಪೇದೆ ವೆಂಕಟೇಶ್ಮೂರ್ತಿ ಎಂಬುವವರು ಕೂಡ ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ವೆಂಕಟೇಶ್ ಮೂರ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


