ಮೋದಿ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರುತ್ತಿದ್ದಾರೆ: ಸೋನಿಯಾ ಗಾಂಧಿ
ನರೇಂದ್ರ ಮೋದಿ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ....

ಬಕ್ಸರ್/ಬಿಹಾರ : ನರೇಂದ್ರ ಮೋದಿ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಬಿಹಾರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದುದರಿಂದಲೇ ಮೋದಿ ಅವರು ದೇಶದ ಪ್ರಧಾನಿಯಾದರು. ಆದರೆ, ಈಗ ಅವರ ಸರ್ಕಾರದ ನೀತಿಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಅವರು ಆರೋಪಿಸಿದರು.
ದೇಶದಲ್ಲಿ ಕೋಮು ದ್ವೇಷ ಬಿತ್ತಲಾಗುತ್ತಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಬುದ್ಧಿಜೀವಿಗಳು ಜೀವ ಭಯದಲ್ಲಿ ಬದುಕುವ ವಾತಾವರಣ ಸೃಷ್ಟಿಯಾಗಿದೆ ಎಂದು ಸೋನಿಯಾ ಗಾಂಧಿ ಆತಂಕ ವ್ಯಕ್ತ ಪಡಿಸಿದರು.
ಚುನಾವಣೆ ವೇಳೆ ಮೋದಿ ರೈತರು, ಮಹಿಳೆಯರು ಹಾಗೂ ಯುವ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಅಗತ್ಯ ವಸ್ತುಗಳ ಬೆಲೆ ಹಾಗೂ ತರಕಾರಿ ಬೆಲೆಗಳು ಗಗನಮುಖಿಯಾಗಿದ್ದು ಅವುಗಳನ್ನು ನಿಯಂತ್ರಿಸಲು ಮೋದಿ ವಿಫಲರಾಗಿದ್ದಾರೆ ಎಂದ ಆಪಾದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


