ದೆಹಲಿ: ಬೆಂಕಿಗೆ ಆಹುತಿಯಾದ ಮಂಗೋಲ್ಪುರಿ ಸ್ಲಮ್ಮಿನ 400 ಗುಡಿಸಲುಗಳು
ದೆಹಲಿಯ ಮಂಗೋಲ್ಪುರಿ ಪ್ರದೇಶದಲ್ಲಿ ದೊಡ್ಡ ಮಟ್ಟದ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುಮಾರು ೪೦೦ ಗುಡಿಸಲುಗಳು ಬೆಂಕಿಗಾಹುತಿಯಾಗಿ

ನವದೆಹಲಿ: ದೆಹಲಿಯ ಮಂಗೋಲ್ಪುರಿ ಪ್ರದೇಶದಲ್ಲಿ ದೊಡ್ಡ ಮಟ್ಟದ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುಮಾರು ೪೦೦ ಗುಡಿಸಲುಗಳು ಬೆಂಕಿಗಾಹುತಿಯಾಗಿ ನೆಲಸಮವಾಗಿವೆ.
ಇಲ್ಲಿಯವರೆಗೂ ೨೮ ಅಗ್ನಿ ಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿದ್ದರು ಬೆಂಕಿ ನಂದಿಸುವ ಕಾರ್ಯ ಕುಂಠಿತವಾಗಿ ಪ್ರಗತಿಯಲ್ಲಿದೆ.
ಇಲ್ಲಿಯವರೆಗೂ ಯಾವುದೇ ಸಾವಿನ ವರದಿಯಾಗಿಲ್ಲ ಆದರೆ ತಾವು ಉಟ್ಟ ಬಟ್ಟೆ ಹೊರತುಪಡಿಸಿ ತಮ್ಮೆಲ್ಲ ವಸ್ತುಗಳು ಬೆಂಕಿಯಲ್ಲಿ ನಾಶವಾಗಿವೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.
"ಮುಂಜಾವಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ನಮ್ಮ ಮಕ್ಕಳು ನಮ್ಮನ್ನು ಎಚ್ಚರಿಸಿದರು. ನಮ್ಮ ಮನೆಗಳಿಗೆ ಬೆಂಕಿ ಬಿದ್ದಿರುವುದು ಕಂಡಾಕ್ಷಣ ನಮ್ಮ ಮಕ್ಕಳನ್ನು ಎತ್ತಿಕೊಂಡು ಹೊರಗೆ ಓಡಿ ಬಂದೆವು. ಅಡಿಗೆ ಸಾಮಗ್ರಿಗಳಿಮ್ದ ಹಿಡಿದು ಬಟ್ಟೆಯವರೆಗೆ ಎಲ್ಲವೂ ಸುಟ್ಟು ಹೋಗಿದೆ. ನಮ್ಮ ಮೈಮೇಲಿನ ಬಟ್ಟೆಯಷ್ಟೇ ಉಳಿದಿರುವದು" ಎಂದು ನಿವಾಸಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


