ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣ: ಇಬ್ಬರ ಬಂಧನ
ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಸೋಮವಾರ ಇಬ್ಬರು ಆರೋಪಿಗಳನ್ನು...

ಬೆಂಗಳೂರು: ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಸೋಮವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಗದೀಶ್ ಹತ್ಯೆ ಆರೋಪಿಗಳಾದ ಮಧು ಹಾಗೂ ಹರೀಶ್ ಬಾಬುಗೆ ಸಹಾಯ ಮಾಡುತ್ತಿದ್ದ ಆರೋಪದ ಮೇಲೆ ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಮೆಕ್ಯಾನಿಕ್ ನಿಜಾಮ್ ಹಾಗೂ ಲ್ಯಾಬ್ ಟೆಕ್ನಿಷೀಯನ್ ಆಗಿರುವ ಮಂಜುನಾಥ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರತಂದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.
ಮಧು ಹರೀಶ್ ಬಾಬು ಕದ್ದ ಬೈಕ್‌ಗಳನ್ನು ನಿಜಾಮ್ ಬಳಿ ರಿಪೇರಿ ಮಾಡಿಸುತ್ತಿದ್ದರು ಮತ್ತು ಮಂಜುನಾಥ್ ಆರೋಪಿಗಳಿಗೆ ಸಿಮ್ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


