ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ದೂರು
ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ...

ಬೆಂಗಳೂರು: ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯುವ ಕಾಂಗ್ರೆಸ್ ಉಪಾಧ್ಯಕ್ಷ ಆನಂದ್ ಅವರು ದೂರು ನೀಡಿದ್ದು, ಕೇಂದ್ರ ಸಚಿವರಾಗಿರುವ ವಿ.ಕೆ. ಸಿಂಗ್ ಅವರ ಹೇಳಿಕೆ ದಲಿತರನ್ನು ಅವಮಾನಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರಕರಣ ಹೊರ ರಾಜ್ಯದಲ್ಲಿ ನಡೆದಿರುವ ಕಾರಣ ದೂರು ತೆಗೆದುಕೊಂಡು ಹಿಂಬರಹ ನೀಡಲಾಗಿದೆ ಎಂದು ಹೈ ಗ್ರೌಂಡ್ಸ್ ಪೊಲೀಸರು ತಿಳಿಸಿದ್ದಾರೆ. ಹರಿಯಾಣದಲ್ಲಿ ದಲಿತ ಮಕ್ಕಳ ಹತ್ಯೆ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ವಿ.ಕೆ.ಸಿಂಗ್, ಎಲ್ಲೋ ನಾಯಿಗೆ ಕಲ್ಲು ಹೊಡೆದರೆ ಕೇಂದ್ರವನ್ನು ದೂಷಿಸುವುದು ಸರಿಯಲ್ಲ. ಇಂತಹ ವಿಚಾರಗಳು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಸಿಂಗ್ ಅವರ ಹೇಳಿಕೆ ರಾಷ್ಟ್ರಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


