ನೂತನ ಸಚಿವರಿಗೆ ಖಾತೆ ಹಂಚಿಕೆ: ಪರಮೇಶ್ವರ್ ಗೆ ಗೃಹ ಖಾತೆ
ನಿನ್ನೆಯಷ್ಟೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಸಂಪುಟಕ್ಕೆ ಸೇರ್ಪಡೆಯಾದಂತಹ ನೂತನ ನಾಲ್ಕು ಸಚಿವರಿಗೆ...

Published On :
ಬೆಂಗಳೂರು: ನಿನ್ನೆಯಷ್ಟೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಸಂಪುಟಕ್ಕೆ ಸೇರ್ಪಡೆಯಾದಂತಹ ನೂತನ ನಾಲ್ಕು ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಖಾತೆ ಹಂಚಿಕೆ ಮಾಡಿದ್ದಾರೆ.
ಜಿ ಪರಮೇಶ್ವರ್ ಅವರಿಗೆ ಗೃಹ ಖಾತೆ, ವಿನಯ್ ಕುಲಕರ್ಣಿಗೆ ಗಣಿ ಮತ್ತು ಭೂ ವಿಜ್ಞಾನ, ಅರಕಲಗೂಡು ಶಾಸಕ ಎ ಮಂಜು ಅವರಿಗೆ ಪಶು ಸಂಗೋಪನೆ ಖಾತೆ ನೀಡಲಾಗಿದ್ದು, ಮನೋಹರ್ ತಹಶೀಲ್ದಾರ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ.
ಖಾತೆ ಹಂಚಿಕೆ ಮಾಡಿದ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಕೆಜೆ ಜಾರ್ಜ್ ಅವರ ಸ್ಥಾನಕ್ಕೆ ಡಾ.ಜಿ ಪರಮೇಶ್ವರ್ ಅವರನ್ನು ತರಲಾಗಿದೆ.
ಇನ್ನು ಗೃಹ ಸಚಿವರಾಗಿದ್ದ ಕೆಜೆ ಜಾರ್ಜ್ ಅವರಿಗೆ ಬೆಂಗಳೂರು ಉಸ್ತುವಾರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಕೊಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
G ParameshwaraVinay Kulkarniವಿನಯ್ ಕುಲಕರ್ಣಿA ManjuManohar Tahsildarಜಿ. ಪರಮೇಶ್ವರಎ ಮಂಜುಮನೋಹರ್ ತಹಶೀಲ್ದಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


