ಬಿಬಿಎಂಪಿ: 11ಕ್ಕೆ ಮೇಯರ್ ಚುನಾವಣೆ ನಿಗದಿ
ಬಹು ನಿರೀಕ್ಷಿತ ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದ್ದು, ಸೆ. 11ರಂದು ಚುನಾವಣೆ ನಡೆಯಲಿದೆ...

ಬೆಂಗಳೂರು: ಬಹು ನಿರೀಕ್ಷಿತ ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದ್ದು, ಸೆ. 11ರಂದು ಚುನಾವಣೆ ನಡೆಯಲಿದೆ. ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ ಅವರು ಈ ಸಂಬಂಧ ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.
ಚುನಾವಣೆ ದಿನಾಂಕ, ಸಮಯ ಹಾಗೂ 260 ಅರ್ಹ ಜನಪ್ರತಿನಿಧಿಗಳ ಹೆಸರುಗಳನ್ನೂ ವಿವರಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಅಂದು ಬೆಳಗ್ಗೆ 8 ಗಂಟೆಯಿಂದಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದ್ದು, ಆಕಾಂಕ್ಷಿ ಗಳು ಬೆಳಗ್ಗೆ 9.30ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ. ನಂತರ 11.30ರ ವೇಳೆಗೆ ಮೇಯರ್, ಉಪ ಮೇಯರ್ ಚುನಾವಣೆಗೆ ಸಭೆ ಆರಂಭಿಸಲಾಗುತ್ತದೆ. ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಆರಂಭದಲ್ಲೇ ಜಯಂತಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿ ಭೀಮಪ್ಪ ಹೇಳಿದ್ದಾರೆ.
ಪ್ರಾದೇಶಿಕ ಆಯುಕ್ತರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವವರ ಹೆಸರು ಪ್ರಸ್ತಾಪಿಸುತ್ತಾರೆ. ಆ ಸಂದರ್ಭ ದಲ್ಲಿ ಮೇಯರ್ ಸ್ಥಾನಕ್ಕೆ ಒಬ್ಬರೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರೆ, ಅವಿರೋಧ ಆಯ್ಕೆ ಎಂದು ಪ್ರಕಟಿಸಲಾಗುತ್ತದೆ. ಒಂದು ವೇಳೆ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಪಪತ್ರ ಸಲ್ಲಿಸಿದ್ದರೆ, ಆ ಅಭ್ಯರ್ಥಿಗಳ ಆಯ್ಕೆ ಯನ್ನು ಮತಕ್ಕೆ ಹಾಕಲಾಗುತ್ತದೆ. ಗೌಪ್ಯ ಮತದಾನ ಪದ್ಧತಿ ಇಲ್ಲದ ಕಾರಣ ಕೈ ಎತ್ತಿ ಬೆಂಬಲಿಸಿ ಮತ ಹಾಕುವ ಪ್ರಕ್ರಿಯೆ ನಡೆಸಲಾಗುತ್ತದೆ. ಆನಂತರ 12 ಸ್ಥಾಯಿ ಸಮಿತಿಗಳ ಚುನಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


