ಕಲಬುರ್ಗಿ ಹತ್ಯೆ: ಚಂಪಾ ಪಂಪ ಪ್ರಶಸ್ತಿ ವಾಪಸ್
ಕನ್ನಡ ವಿದ್ವಾಂಸ ಹಾಗೂ ವಿಚಾರವಾದಿ ಎಂ.ಎಂ. ಕಲಬುರ್ಗಿ ಅವರ ಬರ್ಬರ ಹತ್ಯೆ ಖಂಡಿಸಿ ಕನ್ನಡದ ಸಾಹಿತಿ ಚಂದ್ರಶೇಖರ ಪಾಟೀಲ್...

ಬೆಂಗಳೂರು/ನವದೆಹಲಿ: ಕನ್ನಡ ವಿದ್ವಾಂಸ ಹಾಗೂ ವಿಚಾರವಾದಿ ಎಂ.ಎಂ. ಕಲಬುರ್ಗಿ ಅವರ ಬರ್ಬರ ಹತ್ಯೆ ಖಂಡಿಸಿ ಕನ್ನಡದ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಪಂಪ ಪ್ರಶಸ್ತಿ ವಾಪಸ್ ನೀಡಲು ನಿರ್ಧರಿಸಿದ್ದಾರೆ.
ಸೋಮವಾರ ವಾಪಸ್ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇದೇ ವೇಳೆ ಹಿಂದಿಯ ಪ್ರಮುಖ ಲೇಖಕ ಉದಯ ಪ್ರಕಾಶ್ ಕೂಡ ತಮ್ಮ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಉದಯ್, ತಮ್ಮ ಫೇಸ್ ಬುಕ್‍ನಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.
ಮುಂದಿನವಾರ ದೆಹಲಿಗೆ ವಾಪಸಾಗುತ್ತಲೇ ಸರ್ಕಾರಕ್ಕೆ ಅಧಿಕೃತವಾಗಿ ತಮ್ಮ ನಿರ್ಧಾರ ತಿಳಿಸಿ ಪ್ರಶಸ್ತಿಯ ರು.1 ಲಕ್ಷ ಹಾಗೂ ಫಲಕವನ್ನು ವಾಪಸ್ ಮಾಡುವುದಾಗಿ ಹೇಳಿದ್ದಾರೆ. ಬಗ್ಗೆ ಸಹ ಲೇಖಕರೊಂದಿಗೆ ಚರ್ಚಿಸುವುದಿಲ್ಲ ಎಂದಿರುವ ಅವರು, ಇದು ತಮ್ಮ ವೈಯಕ್ತಿಕ ನಿರ್ಧಾರವಾಗಿದ್ದು, ಸ್ನೇಹಿತರು ತಮ್ಮೊಂದಿಗೆ ಕೈಜೋಡಿಸಿದರೆ ಅದಕ್ಕೆ ಅಭ್ಯಂತರವಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


