ಪ್ರಧಾನ ಸುದ್ದಿ

ಒಆರ್ ಒಪಿ: ಹಿರಿಯ ಯೋಧರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭರವಸೆ ಕೊಟ್ಟ ಹಿನ್ನಲೆಯಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿರಿಯ ನಿವೃತ್ತ ಯೋಧರು ..

ಒಆರ್ ಒಪಿ: ಹಿರಿಯ ಯೋಧರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ
ಹಿರಿಯ ಯೋಧರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ (ಕೃಪೆ :ಎಎನ್ಐ)
Published On :

ನವದೆಹಲಿ: ಸ್ವಯಂ ನಿವೃತ್ತಿ (ವಿಆರ್ ಎಸ್) ಪಡೆದ ಯೋಧರಿಗೂ ಏಕ ಶ್ರೇಣಿ, ಏಕ ಪಿಂಚಣಿ ಅನ್ವಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭರವಸೆ ಕೊಟ್ಟ ಹಿನ್ನಲೆಯಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿರಿಯ ನಿವೃತ್ತ ಯೋಧರು ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅವರು  ನಮ್ಮ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವವರೆಗೆ ಪ್ರತಿಭಟನೆಯನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ.

ಏಕ ಶ್ರೇಣಿ ಏಕ ಪಿಂಚಣಿ (ಒಆರ್ ಒಪಿ) ಯೋಜನೆ ಘೋಷಣೆಯಾಗುವವರೆಗೂ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಣ ತೊಟ್ಟು, ಮಾಜಿ ಯೋಧರು ಸತ್ಯಾಗ್ರಹ ಆರಂಭಿಸಿದ್ದರು. ಇದೀಗ ಪ್ರಧಾನಿ ಭರವಸೆ ಹಿನ್ನೆಲೆಯಲ್ಲಿ ನಿವೃತ್ತ ಕರ್ನಲ್ ಪುಷ್ಪೇಂದರ್ ಸಿಂಗ್ ಹಾಗೂ 13 ಮಂದಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ, ತಂಪು ಪಾನೀಯ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಶನಿವಾರ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರೀಕರ್ ಘೋಷಿಸಿದ್ದರು. ನಿವೃತ್ತ ಯೋಧರ ಪ್ರತಿಭಟನೆಗೆ ಮಣಿದಿದ್ದ ಕೇಂದ್ರ ಸರ್ಕಾರ ಕೊನೆಗೂ ಯೋಜನೆ ಘೋಷಿಸಿದ್ದು, ಸಂತಸ ತಂದಿರುವುದಾಗಿ ಹೇಳಿದ ನಿವೃತ್ತ ಯೋಧರು, ಇದು ನಮಗೆ ಪೂರ್ಣ ಸಮಾಧಾನ ತಂದಿಲ್ಲ. ಕೆಲವೇ ಬೇಡಿಕೆ ಈಡೇರಿಸಿದ್ದು, ಸಂಪೂರ್ಣ ಬೇಡಿಕೆ ಈಡೇರಿಕೆಯಾಗುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.