ಸುದೀಪ್ -ಪ್ರಿಯಾ ವಿಚ್ಛೇದನಕ್ಕೆ ಯಾರು ಕಾರಣ...?
ಶುಕ್ರವಾರ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೂಲಕ ಸುದ್ದಿಗೆ ಗ್ರಾಸವಾಗಿರುವ...

ಬೆಂಗಳೂರು: ಶುಕ್ರವಾರ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೂಲಕ ಸುದ್ದಿಗೆ ಗ್ರಾಸವಾಗಿರುವ ಕನ್ನಡದ ಖ್ಯಾತ ನಟ ಸುದೀಪ್ ಇಂದು ಟ್ವಿಟ್ಟರ್ ನಲ್ಲಿ ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳ ಸಂದೇಹಗಳಿಗೆ ಉತ್ತರ ಕೊಡಲು ಪ್ರಯತ್ನಿಸಿದ್ದಾರೆ.
'' ನನ್ನ ಜೀವನದ ಬೆಳವಣಿಗೆ ಬಗ್ಗೆ ಅನೇಕ ಚಾನೆಲ್ ಗಳು ಮತ್ತು ಪತ್ರಿಕೆಗಳ ಜೊತೆ ಮಾತನಾಡಿದ್ದೇನೆ. ನಾನು ಈ ವಿಷಯವನ್ನು ಮುಚ್ಚಿಡಲು ಅಥವಾ ಪರಿಸ್ಥಿತಿಯಿಂದ ಓಡಿಹೋಗಲು ಇಚ್ಛಿಸುವುದಿಲ್ಲ. ನನ್ನ ಬಗ್ಗೆ ಇರುವ ಕಾಳಜಿ ಮತ್ತು ನಿಮಗಿರುವ ಕುತೂಹಲದ ಬಗ್ಗೆ ನನಗೆ ಅರ್ಥವಾಗುತ್ತದೆ. ನನ್ನ ಕುಟುಂಬಕ್ಕೆ ನಿಮ್ಮ ಪ್ರೀತಿಯ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ. ಇನ್ನೊಂದು ಟ್ವೀಟ್ ನಲ್ಲಿ, ನನ್ನ ಇಂದಿನ ಈ ಸ್ಥಿತಿಗೆ ಯಾರು ಹೊಣೆಗಾರರೋ ಅವರಿಗೂ ನನ್ನ ಧನ್ಯವಾದಗಳು, ಅವರಿಗೆ ಒಳ್ಳೆಯದಾಗಲಿ, ಸಂತೋಷವಾಗಿರಿ, ನನಗೆ ಆಶೀರ್ವಾದ ಮಾಡಿ ಎಂದು ಹೇಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
2001ರಲ್ಲಿ ಸುದೀಪ್ ಕೇರಳ ಮೂಲದ ನಾಯರ್ ಕುಟುಂಬದ ಪ್ರಿಯಾ ರಾಧಕೃಷ್ಣನ್ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರಿಗೂ 11 ವರ್ಷದ ಮಗಳು ಸಾನ್ವಿ ಇದ್ದು, ಆಕೆಯನ್ನು ಪತ್ನಿ ಪ್ರಿಯ ಸುಪರ್ದಿಗೆ ನೀಡಲು ಸುದೀಪ್ ಒಪ್ಪಿದ್ದಾರೆ. ಅಲ್ಲದೇ ಇಬ್ಬರ ಜೀವನಾಂಶಕ್ಕೆ 19 ಕೋಟಿ ನೀಡಲು ಒಪ್ಪಿದ್ದಾರೆನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


