ಮಹದಾಯಿ ಯೋಜನೆ ಕಿಚ್ಚು ಹೆಚ್ಚಿಸಿದ ಸ್ಯಾಂಡಲ್‌ವುಡ್
ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳು ಅನುಷ್ಠಾನಕ್ಕೆ ಒತ್ತಾಯಿಸಿ ಸ್ಯಾಂಡಲ್‌ವುಡ್ನ ನಟ-ನಟಿಯರು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ...

Published On :
ಹುಬ್ಬಳ್ಳಿ: ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳು ಅನುಷ್ಠಾನಕ್ಕೆ ಒತ್ತಾಯಿಸಿ ಸ್ಯಾಂಡಲ್‌ವುಡ್ ನ ನಟ-ನಟಿಯರು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸುತ್ತಿದ್ದಾರೆ.
ಮೊದಲಿಗೆ ಮೂರು ಸಾವಿರ ಮಠದ ಶ್ರೀಗಳ ಬಳಿ ಆಶೀರ್ವಾದ ಪಡೆದ ಚಿತ್ರತಂಡ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟಿದ್ದಾರೆ.
ಮೂರು ಸಾವಿರ ಮಠದಿಂದ ಪದ್ಮಾ ಟಾಕೀಸ್, ಕೊಪ್ಪಿಕರ ರಸ್ತೆ, ಲ್ಯಾಮಿಂಗ್ಟನ್ ರಸ್ತೆ ಮೂಲಕ ಹಾದು ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ತೆರಳಿದೆ. ನಂತರ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ಸ್ಯಾಂಡಲ್ವುಡ್ ಮಂದಿ ಮಾತನಾಡಲಿದ್ದಾರೆ.
ತಮ್ಮ ನೆಚ್ಚಿನ ನಟ-ನಟಿಯರನ್ನು ಕಾಣುವ ಸಲುವಾಗಿ ಹುಬ್ಬಳ್ಳಿಯಲ್ಲಿ ಲಕ್ಷಾಂತರ ಮಂದಿ ಸೇರಿದ್ದು, ಮೆರವಣಿಗೆಯಲ್ಲಿ ಭಾಗಿಯಾಗಿರುವ ಅಭಿಮಾನಿಗಳತ್ತ ಚಿತ್ರತಂಡ ಕೈ ಬೀಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


