'ನನ್ನ ಮಗ ಮರಳು ದಂಧೆಯಲ್ಲಿ ಭಾಗಿಯಾಗಿದ್ದರೆ ನೇತು ಹಾಕುತ್ತೇನೆ': ಸಿಎಂ
ನನ್ನ ಮಗ ಮರಳು ದಂಧೆಯಲ್ಲಿ ಭಾಗಿಯಾಗಿದ್ದರೆ ನೇತು ಹಾಕುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋಮವಾರ ಹೇಳಿದ್ದಾರೆ.

ಮೈಸೂರು: 'ನನ್ನ ಮಗ ಮರಳು ದಂಧೆಯಲ್ಲಿ ಭಾಗಿಯಾಗಿದ್ದರೆ ನೇತು ಹಾಕುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋಮವಾರ ಹೇಳಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನನ್ನ ಮತ್ತು ಸಚಿವ ಮಹದೇವಪ್ಪ ಅವರ ಮಗ ಮರಳು ದಂಧೆಯಲ್ಲಿ ಬಾಗಿಯಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರ ಆರೋಪ ಮಾಡುತ್ತಿದ್ದಾರೆ. ಆದರೆ ನನ್ನ ಮಕ್ಕಳು ಮರಳು ದಂಧೆಯಲ್ಲಿ ಬಾಗಿಯಾಗಿಲ್ಲ. ಒಂದು ವೇಳೆ ಭಾಗಿಯಾಗಿದ್ದರೆ ಅವರನ್ನು ನೇಣು ಹಾಕುತ್ತೇನೆ ಎಂದರು.
ಇಷ್ಟೊಂದು ಕೀಳಾಗಿ ಮಾತನಾಡುವವರನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಬಿಜೆಪಿ ನಾಯಕರು ರಾಜಕೀಯ ಮೌಲ್ಯ ಹಾಳು ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಬಿಜೆಪಿ ನಾಯಕರ ಮುಂದೆಯೇ ಕೇಂದ್ರಕ್ಕೆ ಮಾಹಿತಿ ನೀಡಿದ್ದೇವೆ. ಆದರೂ ಮಾಹಿತಿ ನೀಡಿಲ್ಲ ಎಂದು ಸುಳ್ಳು ಆರೋಪಿಸುತ್ತಿದ್ದಾರೆ.
ಇನ್ನು ಇದೇವೇಳೆ, ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ತಿರುಗೇಟು ನೀಡಿದ ಸಿಎಂ, ಕೇಂದ್ರ ಸರ್ಕಾರ ಈವರೆಗೂ ಒಂದು ರುಪಾಯಿ ನೀಡಿಲ್ಲ. ಮೊದಲು ರಾಷ್ಟ್ರೀಕೃತ ಬ್ಯಾಂಕ್ಗಳ ರೈತರ ಸಾಲ ಮನ್ನಾ ಮಾಡಲಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


