ಪ್ರಧಾನ ಸುದ್ದಿ

ಮೃತ ರೈತನ ಮಗನಿಂದ ಪರಿಹಾರಕ್ಕೆ ಅರ್ಜಿ, ಉದ್ಯೋಗಕ್ಕೆ ಕೋರಿಕೆ

ಸಾಲದ ಬಾಧೆಯಿಂದ ಇತ್ತೀಚೆಗೆ ಸಾವನ್ನಪ್ಪಿದ ಮಂಡ್ಯ ತಾಲೂಕು ಹಲ್ಲಗೆರೆ ರೈತನ ಮಗ ಯೋಗೇಶ್ ಮುಖ್ಯಮಂತ್ರಿಯವರನ್ನು ಇಂದು ಜನತಾದರ್ಶನದಲ್ಲಿ...

ಮೃತ ರೈತನ ಮಗನಿಂದ ಪರಿಹಾರಕ್ಕೆ ಅರ್ಜಿ, ಉದ್ಯೋಗಕ್ಕೆ ಕೋರಿಕೆ
ಜನತಾದರ್ಶನದ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸಾಲದ ಬಾಧೆಯಿಂದ ಇತ್ತೀಚೆಗೆ ಸಾವನ್ನಪ್ಪಿದ ಮಂಡ್ಯ ತಾಲೂಕು ಹಲ್ಲಗೆರೆ ರೈತನ ಮಗ ಯೋಗೇಶ್ ಮುಖ್ಯಮಂತ್ರಿಯವರನ್ನು ಇಂದು ಜನತಾದರ್ಶನದಲ್ಲಿ ಭೇಟಿ ಮಾಡಿ, ಸರ್ಕಾರಿ ಕೆಲಸ ಕೊಡಿಸುವಂತೆ ಮನವಿ ಸಲ್ಲಿಸಿದರು. ತಮ್ಮ ತಂದೆ ಸಾವಿಗೆ ಈವರೆಗೂ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದಾಗ, ಈ ಬಗ್ಗೆ ಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದರು.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ಆಗಮಿಸಿದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ವಿನೋದ್ ರಾಜ್, ಅರಣ್ಯ ಇಲಾಖೆ ಸೋಲದೇವನಹಳ್ಳಿಯಲ್ಲಿ ಕಳೆದ 80 ವರ್ಷಗಳಿಂದ ಕಂದಾಯ ಭೂಮಿಯಲ್ಲಿ ಕೆಲಸ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ತಾವು ಹಲವಾರು ವರ್ಷಗಳಿಂದ ಜಮೀನು ಹೊಂದಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದೇವೆ. ಆದುದರಿಂದ ಸರ್ಕಾರ ಮಧ್ಯಪ್ರವೇಶಿಸಿ ಕೂಡಲೇ ರೈತರ ಮತ್ತು ತಮ್ಮ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡರು.ಅದಕ್ಕೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕರೆ ಮಾಡಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ನಿಲ್ಲಿಸುವಂತೆ ಸೂಚಿಸಿದರು.

ಬೆಂಗಳೂರಿನ ಮಾಗಡಿ ರಸ್ತೆ ಕಡಬಗೆರೆ ನಿವಾಸಿ ಸುನೀತಾ ಎಂಬ ಮಹಿಳೆ ಸಿಎಂ ಸಿದ್ದರಾಮಯ್ಯನವರ ಬಳಿ ಕಣ್ಣೀರಿಟ್ಟು, ಸ್ಲಂಬೋರ್ಡ್ ಗೆ ಹಣ ಪಾವತಿಸಿದರೂ ಮನೆ ಸಿಕ್ಕಿಲ್ಲ. ಈಗ ಇರುವ ಮನೆ ಮಾಲೀಕರು ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಕೂಡಲೇ ತಮಗೊಂದು ಸೂರು ಒದಗಿಸಬೇಕು ಎಂದು ಅತ್ತುಕೊಂಡರು. ಆಗ ಸಿಎಂ  ರಾಮನಗರ ಎಸ್ಪಿ ಚಂದ್ರಗುಪ್ತಾಗೆ ಕರೆ ಮಾಡಿ ಕೂಡಲೇ ವ್ಯವಸ್ಥೆ ಮಾಡಿಕೊಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಹಾಸನದಿಂದ ಬಂದ ಕಾಂಗ್ರೆಸ್ ಕಾರ್ಯಕರ್ತರು, ಅರಕಲಗೂಡು ಶಾಸಕ ಎ.ಮಂಜು ಅವರಿಗೆ ಮಂತ್ರಿ ಸ್ಥಾನ ಕೊಡಿ, ಇಲ್ಲವೇ ಹಾಸನವನ್ನು ಮೈಸೂರು ಜಿಲ್ಲೆಯಲ್ಲಿ ವಿಲೀನ ಮಾಡಿ ಎಂಬ ಬೇಡಿಕೆಯನ್ನು ಮುಂದಿಟ್ಟರು. ಜಿಲ್ಲೆಯಿಂದ ಶಾಸಕ ಪುಟ್ಟೇಗೌಡ ನೇತೃತ್ವದಲ್ಲಿ ಆಗಮಿಸಿದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಜನತಾದರ್ಶನ ಆರಂಭಕ್ಕೂ ಮುನ್ನ ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿದ ಘಟನೆ ನಡೆಯಿತು.

ಈ ಬಾರಿ ಜನತಾದರ್ಶನದಲ್ಲಿ ಇದುವರೆಗೆ ಸುಮಾರು 450 ಮಂದಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಕೋರಿ ಮುಖ್ಯಮಂತ್ರಿ ಬಳಿ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.