ಪ್ರಧಾನ ಸುದ್ದಿ

ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಬಯಲು: 2 ವಿಷಯಗಳ ಪರೀಕ್ಷೆ ಮುಂದಕ್ಕೆ

ಸದಾ ವಿವಾದವನ್ನೇ ಮೈಮೇಲೆ ಎಳೆದುಕೊಳ್ಳುತ್ತಿರುವ ಕರ್ನಾಟಕ ಲೋಕ ಸೇವಾ ಆಯೋಗ ಈಗ ಮತ್ತೊಂದು ಸಮಸ್ಯೆಯನ್ನು ಸೃಷ್ಟಿಸಿಕೊಂಡಿದೆ. ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ `ಎ' ಹಾಗೂ ಗ್ರೂಪ್ `ಬಿ' ಶ್ರೇಣಿಯ 465 ಹುದ್ದೆಗಳ ನೇಮಕಕ್ಕೆ ಸಂಬಂಧಿಸಿ ಸೆ.18ರಿಂದ ಮುಖ್ಯ ಪರೀಕ್ಷೆ ನಡೆಯುತ್ತಿದ್ದು...

ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಬಯಲು: 2 ವಿಷಯಗಳ ಪರೀಕ್ಷೆ ಮುಂದಕ್ಕೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಸದಾ ವಿವಾದವನ್ನೇ ಮೈಮೇಲೆ ಎಳೆದುಕೊಳ್ಳುತ್ತಿರುವ ಕರ್ನಾಟಕ ಲೋಕ ಸೇವಾ ಆಯೋಗ ಈಗ ಮತ್ತೊಂದು ಸಮಸ್ಯೆಯನ್ನು ಸೃಷ್ಟಿಸಿಕೊಂಡಿದೆ. ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ `ಎ' ಹಾಗೂ ಗ್ರೂಪ್ `ಬಿ' ಶ್ರೇಣಿಯ 465 ಹುದ್ದೆಗಳ ನೇಮಕಕ್ಕೆ ಸಂಬಂಧಿಸಿ ಸೆ.18ರಿಂದ ಮುಖ್ಯ ಪರೀಕ್ಷೆ ನಡೆಯುತ್ತಿದ್ದು, ಶನಿವಾರ ಪ್ರಬಂಧ ವಿಷಯ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳಿಗೆ ಸೋಮವಾರ ನಡೆಯಬೇಕಿದ್ದ ಭೂಗೋಳ ಶಾಸ್ತ್ರ, ಸಾರ್ವಜನಿಕ ಆಡಳಿತ ವಿಷಯದ ಪ್ರಶ್ನೆ ಪತ್ರಿಕೆ ನೀಡಲಾಗಿದೆ.

ಈ ಮಧ್ಯೆ ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ಮತ್ತು ಸಮಗ್ರ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸದಾ ವಿವಾದವನ್ನೇ ಮೈಮೇಲೆ ಎಳೆದುಕೊಳ್ಳುತ್ತಿರುವ ಕರ್ನಾಟಕ ಲೋಕ ಸೇವಾ ಆಯೋಗ ಈಗ ಮತ್ತೊಂದು ಸಮಸ್ಯೆಯನ್ನು ಸೃಷ್ಟಿಸಿಕೊಂಡಿದೆ. ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ `ಎ' ಹಾಗೂ ಗ್ರೂಪ್ `ಬಿ' ಶ್ರೇಣಿಯ 465 ಹುದ್ದೆಗಳ ನೇಮಕಕ್ಕೆ ಸಂಬಂಧಿಸಿ ಸೆಪ್ಟೆಂಬರ್ 18ರಿಂದ ಮುಖ್ಯ ಪರೀಕ್ಷೆ ನಡೆಯುತ್ತಿದ್ದು, ಶನಿವಾರ ಪ್ರಬಂಧ ವಿಷಯ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳಿಗೆ ಸೋಮವಾರ ನಡೆಯಬೇಕಿದ್ದ ಭೂಗೋಳಶಾಸ್ತ್ರ, ಸಾರ್ವಜ ನಿಕ ಆಡಳಿತ ವಿಷಯದ ಪ್ರಶ್ನೆ ಪತ್ರಿಕೆ ನೀಡಲಾಗಿದೆ.

ಇದರಿಂದ ಗೊಂದಲಕ್ಕೀಡಾದ ಅನೇಕ ಅಭ್ಯರ್ಥಿಗಳು ಈ ಬಗ್ಗೆ ಕೆಪಿಎಸ್‍ಸಿ ಕಾರ್ಯದರ್ಶಿ ಅವರಿಗೆ ಲಿಖಿತ ದೂರು ನೀಡಿದ್ದು, ಮರುಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ. ಮಾಗಡಿ ಪರೀಕ್ಷಾ ಕೇಂದ್ರದ ಅಭ್ಯರ್ಥಿಗಳು ಸಾಮೂಹಿಕವಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಬೆಂಗಳೂರು, ಧಾರವಾಡ ಸೇರಿ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಪ್ರಬಂಧ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೊಂದಿಗೆ ಭೂಗೋಳಶಾಸ್ತ್ರ ಹಾಗೂ ಸಾರ್ವಜನಿಕ ಆಡಳಿತದ ಪ್ರಶ್ನೆ ಪತ್ರಿಕೆಯನ್ನೂ ವಿತರಿಸಲಾಗಿದೆ. ಗೊಂದಲಕ್ಕೀಡಾದ ಬೆಂಗಳೂರಿನ ಕೆಲವು ಅಭ್ಯರ್ಥಿಗಳು
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಯೋಗದ ಸಮರ್ಥನೆ: ಈ ಮಧ್ಯೆ ಈ ಆರೋಪವನ್ನು ಸರಾಸಗಟಾಗಿ ತಳ್ಳಿ ಹಾಕುವು ದರೊಂದಿಗೆ ತನ್ನನ್ನು ಸಮರ್ಥಿಸಿಕೊಂಡಿರುವ ಆಯೋಗವು, ಶನಿವಾರ ಪ್ರಬಂಧ ಪರೀಕ್ಷೆ ಹೊರತುಪಡಿಸಿ ಬೇರೆ ವಿಷಯದ ಪ್ರಶ್ನೆ ಪತ್ರಿಕೆಗಳು ಅಧಿಕೃತವಾದುದಲ್ಲ. ಈ ಪ್ರಶ್ನೆ ಪತ್ರಿಕೆ ಯಾವುದೇ ಕಾರಣಕ್ಕೂ ಪುನರಾವರ್ತನೆಯಾಗುವುದಿಲ್ಲ. ಅಭ್ಯರ್ಥಿಗಳಿಗೆ ಅನ್ಯಾಯವಾಗುವುದಿಲ್ಲ ಎಂದು ಹೇಳಿದೆ. ಜೊತೆಗೆ ಪರೀಕ್ಷೆ ಮುಂದೂಡುವುದಾಗಲೀ, ಮರುಪರೀಕ್ಷೆ ಮಾಡುವ ಸನ್ನಿವೇಶಗಳಾಗಲಿ ಇಲ್ಲ ಎಂದು ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದಾರೆ.

ಬೇರೆ ವಿಷಯದ ಪ್ರಶ್ನೆಪತ್ರಿಕೆಗಳು ಪ್ಯಾಕಿಂಗ್ ಹಂತದಲ್ಲಿ ಪ್ರಶ್ನೆ ಪತ್ರಿಕೆಯನ್ನು ಬೆರಕೆ ಮಾಡಿರುವ ಸಾಧ್ಯತೆಗಳಿವೆ. ಪ್ರಶ್ನೆ ಪತ್ರಿಕೆಯನ್ನು ಒಂದು ಬಾರಿ ಪ್ಯಾಕ್ ಮಾಡಿ, ಸೀಲ್ ಮಾಡಿದ ಬಳಿಕ ಆಯಾ ಕೇಂದ್ರಗಳಲ್ಲಿ ಅವುಗಳನ್ನು ತೆರೆಯಲಾಗುತ್ತದೆ. ಹೀಗಾಗಿ ಪ್ಯಾಕಿಂಗ್ ಹಂತದಲ್ಲಿ ಗೊಂದಲವಾಗಿರುವ ಸಾಧ್ಯತೆ ಇದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ಪರಿಶೀಲನೆ ನಡೆದಿದ್ದು, ಯಾವುದೂ ಅಧಿಕೃತ ಪ್ರಶ್ನೆ ಪತ್ರಿಕೆಗಳಲ್ಲ. ಹೀಗಾಗಿ ಪರೀಕ್ಷೆಗಳನ್ನು ನಿಗದಿತ ವೇಳಾಪಟ್ಟಿಯಂತೆಯೇ ನಡೆಸಲಾಗುತ್ತದೆ ಎಂದು ಮನೋಜ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ನಡೆಯುವ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಬದಲಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಕೆಪಿಎಸ್‍ಸಿ ಯಾವುದೇ ಸ್ಪಷ್ಟನೆ ನೀಡಿಲ್ಲ.

ತನಿಖೆ ನಡೆಸಿ ವರದಿ ನೀಡಲು ಸಿಎಂ ಸೂಚನೆ
ಈ ಮಧ್ಯೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಯ ತಿಳಿಯುತ್ತಿದ್ದಂತೆ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಜತೆ ಮಾತನಾಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆಯೂ ಸೂಚನೆ ನೀಡಿದ್ದಾರೆ. ಜತೆಗೆ ಕೆಪಿಎಸ್‍ಸಿ ಪರೀಕ್ಷೆ ವಿಷಯದಲ್ಲಿ ಸಾರ್ವಜನಿಕರು ಹಾಗೂ ಪರೀಕ್ಷಾರ್ಥಿಗಳಲ್ಲಿ ವಿಶ್ವಾಸ ಮೂಡಿಸಬೇಕಾದರೆ ಪರೀಕ್ಷೆಗಳನ್ನು ಮುಂದೂಡುವಂತೆಯೂ ಸೂಚಿಸಿದ್ದಾರೆ. ಹೀಗಾಗಿ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿರುವ ಭೂಗೋಳಶಾಸuಉ ಹಾಗೂ ಸಾರ್ವಜನಿಕ ಆಡಳಿತದ ವಿಷಯಗಳ ಪರೀಕ್ಷೆ ಮುಂದೂಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.