ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಕಡಿದಾಳ್ ಶ್ಯಾಮಣ್ಣ
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸಿರುವ ಪ್ರಗತಿಪರ ರೈತ ಮುಖಂಡ ಕಡಿದಾಳ್ ಶ್ಯಾಮಣ್ಣ ಅವರು, ಬೇಕಾದ್ರೆ...

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸಿರುವ ಪ್ರಗತಿಪರ ರೈತ ಮುಖಂಡ ಕಡಿದಾಳ್ ಶ್ಯಾಮಣ್ಣ ಅವರು, ಬೇಕಾದ್ರೆ ವಿಧಾನಸೌಧದಲ್ಲಿ ಕಸ ಗುಡಿಸ್ತೇನೆ. ಆದರೆ ಮೈಸೂರು ದಸರಾ ಮಾತ್ರ ಉದ್ಘಾಟಿಸಲ್ಲ ಎಂದಿದ್ದಾರೆ.
ಮುಂದಿನ ತಿಂಗಳು ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಕಡಿದಾಳ್ ಶ್ಯಾಮಣ್ಣ ಅವರನ್ನು ಆಹ್ವಾನಿಸಿದ್ದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಶ್ಯಾಮಣ್ಣ, ಯಾವ ಪುರುಷಾರ್ಥಕ್ಕೆ ದಸರಾ ಉದ್ಘಾಟಿಸಬೇಕು ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ರೈತರು ಬರಗಾಲದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿವೆ ಎಂದು ಶ್ಯಾಮಣ್ಣ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


