ಹಜ್ ಯಾತ್ರೆ ವೇಳೆ ಅವಘಡ, ಕಾಲ್ತುಳಿತಕ್ಕೆ 150 ಯಾತ್ರಿಕರು ಬಲಿ
ಸೌದಿ ಅರೇಬಿಯಾದಲ್ಲಿರುವ ಮೆಕ್ಕಾದ ಮಸೀದಿ ಬಳಿ ಪವಿತ್ರ ಹಜ್ ಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ 150 ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು 390ಕ್ಕೂ ಹೆಚ್ಚು...

ದುಬೈ: ಸೌದಿ ಅರೇಬಿಯಾದಲ್ಲಿರುವ ಮೆಕ್ಕಾದ ಮಸೀದಿ ಬಳಿ ಪವಿತ್ರ ಹಜ್ ಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ 150 ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು 390ಕ್ಕೂ ಹೆಚ್ಚು ಯಾತ್ರಿಕರು ತೀವ್ರವಾಗಿ ಗಾಯಗೊಂಡಿರುವ ದುರ್ಘಟನೆ ಗುರುವಾರ ನಡೆದಿದೆ.
ಮೆಕ್ಕಾದಿಂದ ಸುಮಾರು 5 ಕಿ.ಮೀ.ದೂರದಲ್ಲಿರುವ ಮೀನಾದಲ್ಲಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಪರಸ್ಥಿತಿ ನಿಯಂತ್ರಣದಲ್ಲಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಕ್ರೀದ್ ಹಬ್ಬದ ಪ್ರಾರ್ಥನೆ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮೆಕ್ಕಾದಲ್ಲಿ ಕಳೆದ 15 ದಿನಗಳಲ್ಲಿ ಸಂಭವಿಸಿದ ಎರಡನೇ ಭೀಕರ ದುರಂತ ಇದಾಗಿದ್ದು, ಸೆಪ್ಟೆಂಬರ್ 12ರಂದು ಕ್ರೇನ್ ಕುಸಿದು 107 ಮಂದಿ ಮೃತಪಟ್ಟಿದ್ದರು. ಈಗ ಬಕ್ರೀದ್ ಮುನ್ನಾ ದಿನ ಮತ್ತೊಂದು ದುರಂತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


