ಕರ್ನಾಟಕ ಬಂದ್ ಏಕೆ..?
ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹುಬ್ಬಳ್ಳಿ ಸೇರಿದಂತೆ ಮತ್ತಿತರ ನಗರಗಳಿಗೆ ಮಹದಾಯಿ ನದಿಯಿಂದ ಕಳಸಾ-ಬಂಡೂರಿ ನಾಲಾ ಮೂಲಕ ಕುಡಿಯುವ ನೀರು ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂಬುದು ಕನ್ನಡಪರ ಸಂಘಟನೆಗಳ ಆಗ್ರಹವಾಗಿದೆ...

ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹುಬ್ಬಳ್ಳಿ ಸೇರಿದಂತೆ ಮತ್ತಿತರ ನಗರಗಳಿಗೆ ಮಹದಾಯಿ ನದಿಯಿಂದ ಕಳಸಾ-ಬಂಡೂರಿ ನಾಲಾ ಮೂಲಕ ಕುಡಿಯುವ ನೀರು ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂಬುದು ಕನ್ನಡಪರ ಸಂಘಟನೆಗಳ ಆಗ್ರಹವಾಗಿದೆ.
ಇದಕ್ಕಾಗಿ ಕಳೆದ ಎರಡು ತಿಂಗಳಿನಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ ಮತ್ತಿತರ ಕಡೆ ಹೋರಾಟ ತೀವ್ರಗೊಂಡಿದೆ. ಅದರಲ್ಲೂ ನರಗುಂದದಲ್ಲಿ ರೈತ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಇದರ ಜತೆಗೆ ಸಾಲಭಾದೆ ತಾಳಲಾರದೆ ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರಿಗೆ ವಿಶೇಷ ಪ್ಯಾಕೇಜ್ ನೀಡುವುದು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಲಾಗಿದೆ.
ಈ ಮಧ್ಯೆ ಕರ್ನಾಟಕ ಬಂದ್ ವೇಳೆ ಶನಿವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಗೋವಾ ರಾಜ್ಯಕ್ಕೆ ರಫ್ತಾಗುವ ತರಕಾರಿ, ಹಾಲು ಸೇರಿದಂತೆ ಎಲ್ಲಾ ಸರಕು ಸಾಗಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದರಿಂದ ಗೋವಾ ರಾಜ್ಯಕ್ಕೂ ಕೊಂಚಮಟ್ಟಿಗೆ ಬಂದ್ ಬಿಸಿ ಮುಟ್ಟಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


