ಸಿಎಂ ಸಿದ್ದರಾಮಯ್ಯ ಅವರ ಟವಲ್, ದಿಂಬು, ಕಂಬಳಿ ಖರೀದಿಗೆ 14.34 ಲಕ್ಷ ರೂ. ಖರ್ಚು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಮುಖ ವಸ್ತ್ರ ಟವಲ್, ದಿಂಬು ಕವರ್, ಹಾಗೂ ಮನೆಗೆ ಬೆಡ್‌ಶೀಟ್ ಖರೀದಿಸಲು...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಮುಖ ವಸ್ತ್ರ ಟವಲ್, ದಿಂಬು ಕವರ್, ಹಾಗೂ ಮನೆಗೆ ಬೆಡ್‌ಶೀಟ್ ಖರೀದಿಸಲು ಒಂದು ವರ್ಷದಲ್ಲಿ ಬರೋಬ್ಬರಿ 14.34 ಲಕ್ಷ ರುಪಾಯಿ ವೆಚ್ಚ ಮಾಡಲಾಗಿದೆ.
2015–16ರ ಸಾಲಿನಲ್ಲಿ ಮುಖ್ಯಮಂತ್ರಿಗಳ ನಿವಾಸ ‘ಕಾವೇರಿ’ಗೆ ಖರೀದಿಸಿದ ಗೃಹೋಪಯೋಗಿ ವಸ್ತುಗಳು ಮತ್ತು ಖರ್ಚಿನ ವಿವರಗಳನ್ನು ಮಾಹಿತಿ ಹಕ್ಕು ಕಾರ್ಯಕರ್ತ ಮರಿಲಿಂಗೇಗೌಡ ಮಾಲಿ ಪಾಟೀಲ್ ಅವರು ಆರ್‌ಟಿಐ ಕಾಯ್ದೆಯಡಿ ಪಡೆದಿದ್ದು, ಕಳೆದ ಏಪ್ರಿಲ್ ನಿಂದ ಇಲ್ಲಿಯವರೆಗೆ ಅಂದರೆ, ಕೇವಲ ಆರು ತಿಂಗಳಲ್ಲಿ ಸಿಎಂ ಅವರ ಟವಲ್ ಗಾಗಿ 4.78 ಲಕ್ಷ ರುಪಾಯಿ ವೆಚ್ಚ ಮಾಡಲಾಗಿದೆ.
ಇದರ ಜೊತೆಗೆ ಐವರು ಸಚಿವರು ಮನೆ ದುರಸ್ತಿ ಹೆಸರಿನಲ್ಲಿ ಕೋಟಿಗೂ ಹೆಚ್ಚು ಹಣ ವ್ಯಯಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್, ಗೃಹಸಚಿವ ಕೆ.ಜೆ.ಜಾರ್ಜ್, ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ, ಅರಣ್ಯ ಸಚಿವ ರಮಾನಾಥ ರೈ ಅವರ ಮನೆಗಳ ಶೌಚಾಲಯ ದುರಸ್ತಿ, ಬಣ್ಣ ಬಳಿಯಲು, ಟೈಲ್ಸ್, ಚಾವಣಿ ರಿಪೇರಿ ಹೆಸರಿನಲ್ಲಿ ಒಟ್ಟು 1.71ಕೋಟಿ ರುಪಾಯಿ ವ್ಯಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


