ವಾಹನ ಸವಾರರೆ ಎಚ್ಚರ... ಇನ್ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದ್ರೆ ಜೈಲು ಗ್ಯಾರಂಟಿ!
ವಾಹನ ಸವಾರರೇ ಎಚ್ಚರ... ಇನ್ನು ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆ ಗ್ಯಾರಂಟಿ. ಹೌದು ಸಾರ್ವಜನಿಕ...

ಬೆಂಗಳೂರು: ವಾಹನ ಸವಾರರೇ ಎಚ್ಚರ... ಇನ್ನು ಮುಂದೆ ರಸ್ತೆಯಲ್ಲೇ ನಿಂತು ಜಗಳ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆ ಗ್ಯಾರಂಟಿ. ಹೌದು ಸಾರ್ವಜನಿಕ ರಸ್ತೆಯಲ್ಲೇ ನಿಂತು ಜಗಳ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬೆಂಗಳೂರು ಸಂಚಾರಿ ಪೊಲೀಸರು ಮುಂದಾಗಿದ್ದಾರೆ.
ರಸ್ತೆಯಲ್ಲಿ ಜಗಳ ಮಾಡುವವರ ವಿರುದ್ಧ ಐಪಿಸಿ ಸೆಕ್ಷನ್ 160ರ ಅಡಿ ಕೇಸ್ ದಾಖಲಿಸಲು ಅಥವಾ ದಂಡ ವಿಧಿಸಲು ಪೊಲೀಸರು ನಿರ್ಧರಿಸಿದ್ದಾರೆ.
ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಸಣ್ಣಪುಟ್ಟ ವಿಷಯಗಳಿಗೂ ಸಹ ಸವಾರರೊಂದಿಗೆ ಪರಸ್ಪರ ವಾಗ್ವಾದಕ್ಕೀಳಿದು ಬೇರೆಯವರಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಎಂ.ಸಲೀಂ ಅವರು ಹೇಳಿದ್ದಾರೆ.
ಇತ್ತೀಚಿಗೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿನ ಕಾದಾಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


