ಪ್ರಧಾನ ಸುದ್ದಿ

ಎಸಿಬಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಮೊದಲ ದೂರು

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರಚನೆಯಾಗಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಗೆ ಮುಖ್ಯಮಂತ್ರಿ...

ಎಸಿಬಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಮೊದಲ ದೂರು
ಸಿದ್ದರಾಮಯ್ಯ ಹಾಗೂ ದುಬಾರಿ ವಾಚ್
Published On :
ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರಚನೆ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೇ ಮೊದಲ ದೂರು ದಾಖಲಾಗಿದೆ.
ಸಿಎಂ ದುಬಾರಿ ವಾಚ್ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಕೋರಿ ಹೈಕೋರ್ಟ್ ವಕೀಲ ನಟರಾಜ್  ಶರ್ಮಾ ಅವರು ಶನಿವಾರ ಎಸಿಬಿಗೆ ದೂರು ನೀಡಿದ್ದಾರೆ. ಎಸಿಬಿ ರಚನೆಯಾದ ನಂತರ ಬಂದ ಮೊದಲ ದೂರು ಇದಾಗಿದ್ದು, ಅದು ಸಿಎಂ ವಿರುದ್ಧವೇ ದಾಖಲಾಗಿರುವುದು ಮತ್ತೊಂದು ವಿಶೇಷ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದೊರೆಯದ ಕಾರಣ ನಟರಾಜ್ ಶರ್ಮಾ ಅವರು ದೂರನ್ನು ನೇರವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ದುಬಾರಿ ವಾಚ್ ಅಕ್ರಮವಾಗಿ ಬಂದಿರುವ ಸಾಧ್ಯತೆ ಇದ್ದು, ವಾಚ್ ಹಿನ್ನಲೆ ಸಮಗ್ರ ತನಿಖೆಯಾಗಬೇಕು ಎಂದು ನಟರಾಜ ಶರ್ಮಾ ಮನವಿ ಮಾಡಿದ್ದಾರೆ.
ಕಳೆದ ಮಾರ್ಚ್ 30ರಂದು ಎಸಿಬಿ ರಚನೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ರಾಜ್ಯದ 30 ಜಿಲ್ಲೆಗಳಲ್ಲಿ ಎಸಿಬಿ ಪೊಲೀಸ್ ಠಾಣೆಗಳನ್ನು ಆರಂಭಿಸುವುದಾಗಿ ಹೇಳಿತ್ತು. ಅಲ್ಲದೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸಾರ್ವಜನಿಕರು ಈ ಠಾಣೆಗಳಿಗೆ ನೀಡಬಹುದು ಎಂದು ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.