ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ: ಸಚಿವರೊಬ್ಬರ ಪಿಎ ಸೇರಿ ಮೂವರು ಕಿಂಗ್ ಪಿನ್ ಗಳ ಬಂಧನ
ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲವನ್ನು ಭೇದಿಸಿರುವ ಸಿಐಡಿ, ಸಚಿವರೊಬ್ಬರ ಪಿಎ ಸೇರಿದಂತೆ ಪ್ರಮುಖ..

Published On :
ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲವನ್ನು ಭೇದಿಸಿರುವ ಸಿಐಡಿ, ಸಚಿವರೊಬ್ಬರ ಪಿಎ ಸೇರಿದಂತೆ ಪ್ರಮುಖ ಮೂವರು ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.
ಮಾರ್ಚ್ 21ರಂದು ಪ್ರಶ್ನೆ ಪತ್ರಿಕೆ ಸೋರಿಯಾದ ಪ್ರಕರಣ ಸಂಬಂಧ ಬೆಂಗಳೂರಿನ ವಿಜಯನಗರದಲ್ಲಿರುವ ಕೇಂಬ್ರಿಡ್ಜ್ ಕಾಲೇಜ್ ನ ದೈಹಿಕ ಶಿಕ್ಷಕ ಹಾಗೂ ಎಲ್ಐಸಿ ಏಜೆಂಟ್ ಸಹ ಆಗಿರುವ ಮಂಜುನಾಥ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಪಿಎ ಓಬಳ್ ರಾಜ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿ ರುದ್ರಪ್ಪ ಎಂಬುವವರನ್ನು ಬಂಧಿಸಲಾಗಿದೆ ಎಂದು ಸಿಐಡಿ ಡಿಐಜಿ ಸೋನಿಯಾ ನಾರಂಗ್ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಮೊದಲ ಪ್ರಶ್ನೆ ಪತ್ರಿಕೆ ಮಂಜುನಾಥ್ ಗೆ ರವಾನೆಯಾಗಿದ್ದು, ಅದನ್ನು ಆತ ಸಚಿವರ ಪಿಎಗೆ 10 ಲಕ್ಷ ರುಪಾಯಿಗೆ ಮಾರಾಟ ಮಾಡಿದ್ದ. ನಂತರ ಓಬಳ್ ರಾಜ್ ನಿಂದ ಪ್ರಶ್ನೆ ಪತ್ರಿಕೆ ಪಡೆದ ರುದ್ರಪ್ಪ ಅದನ್ನು ವಾಟ್ಸಪ್ ಹಾಗೂ ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸಿದ್ದಲ್ಲದೆ ಕಾಲೇಜ್ ಹಾಗೂ ಟ್ಯುಟೋರಿಯಲ್ಸ್ ಗಳಿಗೆ ಮಾರಾಟ ಮಾಡಿದ್ದಾರೆ ಎಂದು ಸಿಐಡಿ ತಿಳಿಸಿದೆ.
ಇನ್ನು ಮಾರ್ಚ್ 31ರಂದು 2ನೇ ಬಾರಿ ಪ್ರಶ್ನೆ ಪತ್ರಿಕೆ ಸೋರಿಯಾದ ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


