ಪ್ರಧಾನ ಸುದ್ದಿ

ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಮೆಹಬೂಬಾ ಮುಫ್ತಿ

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಇಂದು ಜಮ್ಮು ಮತ್ತು ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ.

ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
Published On :

ಜಮ್ಮು: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಇಂದು ಜಮ್ಮು ಮತ್ತು ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ.

ಸಂಸದೀಯ ವ್ಯವಹಾರಗಳ ಕೆಂದ್ರ ಸಚಿವ ಎಂ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮುಂತಾದವರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದು, ಕಾಂಗ್ರೆಸ್ ಪಕ್ಷ ಪ್ರಮಾಣವಚನ ಸಮಾರಂಭವನ್ನು ಬಹಿಷ್ಕರಿಸಿದೆ.

ರಾಜ್ಯದ ರಾಜಭವನದಲ್ಲಿ ಬೆಳಗ್ಗೆ ೧೧ ಘಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ನೂತನ ಮುಖ್ಯಮಂತ್ರಿ. ರಾಜ್ಯಪಾಲ ಎಂ ಎನ್ ವೋಹ್ರಾ, ಮುಫ್ತಿ ಮತ್ತು ಇತರ ಸಂಪುಟ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ನೆನ್ನೆಯಷ್ಟೇ ರಾಜ್ಯಪಾಲರು ಪಿಡಿಪಿ-ಬಿಜೆಪಿ ಮೈತ್ರಿಯ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು.

ಮುಫ್ತಿ ಅವರ ತಂದೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮತ್ರಿ ಮುಫ್ತಿ ಮುಹಮ್ಮದ್ ಸಯ್ಯದ್ ಅವರು ದಿವಂಗತರಾದ ಹಿನ್ನಲೆಯಲಿ ಬಿಜೆಪಿ-ಪಿಡಿಪಿ ಮೈತ್ರಿ ಮುರಿದುಬಿದ್ದಿತ್ತು. ಆದುದರಿಂದ ಜನವರಿ ೮ರಿಂದ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಆಡಳಿತಕ್ಕೆ ಒಳಪಟ್ಟಿತ್ತು.

೮೭ ಸದಸ್ಯರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಪಿಡಿಪಿ ಪಕ್ಷ ೨೭ ಸದಸ್ಯರನ್ನು ಮತ್ತು ಬಿಜೆಪಿ ೨೫ ಸದಸ್ಯರನ್ನು ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.