ಪ್ರಧಾನ ಸುದ್ದಿ

ಪಿಯು ಮೌಲ್ಯಮಾಪನ ಬಹಿಷ್ಕಾರ: ಕಿಮ್ಮನೆ ನಡೆಸಿದ 5ನೇ ಸಭೆಯೂ ವಿಫಲ, ನಾಳೆಯಿಂದ ಉಪವಾಸ ಸತ್ಯಾಗ್ರಹ

ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ...

ಪಿಯು ಮೌಲ್ಯಮಾಪನ ಬಹಿಷ್ಕಾರ: ಕಿಮ್ಮನೆ ನಡೆಸಿದ 5ನೇ ಸಭೆಯೂ ವಿಫಲ, ನಾಳೆಯಿಂದ ಉಪವಾಸ ಸತ್ಯಾಗ್ರಹ
ಕಿಮ್ಮನೆ ರತ್ನಾಕರ
Published On :
ಬೆಂಗಳೂರು: ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರೊಂದಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮಂಗಳವಾರ ನಡೆಸಿದ 5ನೇ ಸಭೆಯೂ ವಿಫಲವಾಗಿದೆ.
ಮುಷ್ಕರನಿರತ ಉಪನ್ಯಾಸಕರೊಂದಿಗೆ ಇಂದು ಕಿಮ್ಮನೆ ರತ್ಮಾಕರ ಅವರು 5ನೇ ಬಾರಿ ಸಂಧಾನ ಸಭೆ ನಡೆಸಿದರು. ಆದರೆ ಉಪನ್ಯಾಸರು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸಭೆ ಮತ್ತೆ ವಿಫಲವಾಗಿದ್ದು, ಉಪನ್ಯಾಸಕರು ನಾಳೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರು, ಇಂದಿನ ಸಭೆಯಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದರೆ ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಮತ್ತು ನಾಳೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದಾರೆ.
ಏಪ್ರಿಲ್ 2ರಿಂದಲೇ ಪಿಯುಸಿ ಮೌಲ್ಯಮಾಪನ ಆರಂಭವಾಗಬೇಕಿತ್ತು. ಆದರೆ ಪಿಯು ಉಪನ್ಯಾಸಕರ ವೇತನ ಪರಿಷ್ಕರಣೆಗೆಂದು ರಚಿಸಿದ್ದ ಕುಮಾರ್ ನಾಯಕ್ ಅವರ ಸಮಿತಿ 2001ರಲ್ಲಿ ವರದಿ ಸಲ್ಲಿಸಿದರೂ ಸಹ ಸರ್ಕಾರ ಇದರ ಅನುಷ್ಠಾನಕ್ಕೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಪಿಯು ಉಪನ್ಯಾಸಕರು ಮೌಲ್ಯ ಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕುಮಾರ್ ನಾಯಕ್ ವರದಿ ಜಾರಿಗೆ ಅಗ್ರಹಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಇಂದು 10ನೇ ದಿನಕ್ಕೆ ಕಾಲಿಟ್ಟಿದ್ದು, ಏಪ್ರಿಲ್ 13ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿ ಉಪನ್ಯಾಸಕರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.