ಸಂಪುಟ ಪುನಾರಚನೆಗೆ ಬ್ರೇಕ್; ಬರ ಪರಿಹಾರಕ್ಕೆ ಆದ್ಯತೆ ನೀಡಿ: ಸಿಎಂಗೆ ದಿಗ್ವಿಜಯ್ ಸಿಂಗ್
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ.

Published On :
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ.
ಹೌದು, ಈ ಸಂಬಂಧ ಇಂದು ನಗರಕ್ಕೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಸದಕ್ಯ ಸಂಪುಟ ಪುನಾರಚನೆ ವಿಚಾರ ಕೈಬಿಟ್ಟು, ರಾಜ್ಯದಲ್ಲಿ ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡುವಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.
ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಚರ್ಚಿಸಲು ಈಗ ದೆಹಲಿಗೆ ಬರುವುದು ಬೇಡ. ಹೈಕಮಾಂಡ್ ಸೂಚಿಸಿದಾಗ ದೆಹಲಿಗೆ ಬನ್ನಿ ಎಂದು ಸಿಎಂಗೆ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದಾರೆ.
ಇದೇ ವೇಳೆ, ಸಮಾನ ಮನಸ್ಕ ಶಾಸಕರ ಚಟುವಟಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್ ಅವರು, ಶಾಸಕರಿಗೆ ಗುಂಪುಗಾರಿಕೆ ಬಿಟ್ಟು ಬರ ಪರಿಹಾರ ಕಾರ್ಯಗಳಲ್ಲಿ ತೊಡಗುವಂತೆ ಸೂಚಿಸಿ ಎಂದು ಸಿಎಂಗೆ ನಿರ್ದೇಶ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


