ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಹಂಪ್ ಗಳನ್ನು ತೆಗೆಯಿರಿ : ಕೇಂದ್ರ ಸೂಚನೆ
ವೇಗದ ಮಿತಿಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಹಂಪ್ ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ರಾಜ್ಯ ಸರ್ಕಾರ ಹಾಗೂ

ನವದೆಹಲಿ: ವೇಗದ ಮಿತಿಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಾಕಿರುವ ಹಂಪ್ ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ರಾಜ್ಯ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪಿಡಬ್ಲ್ಯುಡಿ, ಬಿಆರ್ಒ ಗಳಿಗೆ ನಿರ್ದೇಶನ ನೀಡಿದೆ.
2014ರ ರಸ್ತೆ ಅಪಘಾತ ವರದಿ ಪ್ರಕಾರ ರಸ್ತೆಯಲ್ಲಿರುವ ಹಂಪ್ ಗಳ ಕಾರಣಕ್ಕೆ ಸಂಭವಿಸಿದ ಅಪಘಾತದಲ್ಲಿ 4,726 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಗುಂಡಿಗಳು ಮತ್ತು ವೇಗ ನಿಯಂತ್ರಕಗಳಿಂದಾಗಿ 6,672 ಮಂದಿ ಅಸು ನೀಗಿದ್ದಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗುವ ಕ್ರಮಗಳ ಮಾಹಿತಿಯನ್ನು ಮುಂದಿನ ಬುಧವಾರ ಸಲ್ಲಿಸುವಂತೆ ಸಚಿವಾಲಯ ತಿಳಿಸಿದೆ.
ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದ್ದರೂ ಸ್ಥಳೀಯ ಪ್ರಾಧಿಕಾರಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗ ನಿಯಂತ್ರಣಕ್ಕೆ ಹಂಪ್ ಗಳನ್ನು ಅಳವಡಿಸುವುದು ಅನಪೇಕ್ಷಿತ. ಇವು ಗಂಭೀರ ಅಪಾಯಗಳಿಗೆ ದಾರಿ ಮಾಡಿ ಕೊಡುತ್ತಿದೆ ಎಂದು ಸಚಿವಾಲಯ ಹೇಳಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


