ಉತ್ತರಪ್ರದೇಶದಿಂದ ಗುಜರಾತ್ ಗೆ ತೆರಳುತ್ತಿದ್ದ ರೈಲಿನಲ್ಲಿ ೧೦೦ ಜನರನ್ನು ದೋಚಿದ ದರೋಡೆಕೋರರು
ಸುಲ್ತಾನಪುರ್ ಎಕ್ಸ್ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ೧೦೦ ಕ್ಕೂ ಹೆಚ್ಚು ಜನ ಪ್ರಯಾಣಿಕರ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ರಾಮಪುರದಲ್ಲಿ ಮಂಗಳವಾರ ದರೋಡೆಕೋರರು ದೋಚಿದ್ದಾರೆ

ಲಕನೌ: ಸುಲ್ತಾನಪುರ್ ಎಕ್ಸ್ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ೧೦೦ ಕ್ಕೂ ಹೆಚ್ಚು ಜನ ಪ್ರಯಾಣಿಕರ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ರಾಮಪುರದಲ್ಲಿ ಮಂಗಳವಾರ ದರೋಡೆಕೋರರು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಲ್ತಾನಪುರದಿಂದ ಗುಜರಾತಿನ ಅಹಮದಾಬಾದಿಗೆ ಹೋಗುತ್ತಿದ್ದ ರೈಲಿನ ಭೋಗಿಗಳಿಗೆ ನುಗ್ಗಿದ ಶಸ್ತ್ರಾಸ್ತ್ರಗಳನ್ನು ಹಿಡಿದ ೧೨ ಕ್ಕೂ ಹೆಚ್ಚು ಜನ ಡಕಾಯಿತರು ಬಂಧೂಕು ತೋರಿಸಿ ದರೋಡೆ ಮಾಡಿ ತಪ್ಪಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಮಾರ್ಗದ ಮೊರಾದಾಬಾದ್ ಮತ್ತು ಇತರ ರೈಲ್ವೇ ನಿಲ್ದಾಣಗಳಲ್ಲಿ ಎಚ್ಚರಿಕೆಯಿಂದ ಇರಲು ಸರ್ಕಾರಿ ರೈಲ್ವೇ ಪೋಲಿಸ್ ತಂಡಗಳಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


