ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ನಿಧನ
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ವಿಧಿವಶರಾಗಿದ್ದು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಾಲಂಬಿ ಅವರು ಬೆಂಗಳೂರಿನ ಶೇಖರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ...

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ವಿಧಿವಶರಾಗಿದ್ದು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಾಲಂಬಿ ಅವರು ಬೆಂಗಳೂರಿನ ಶೇಖರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಿಡ್ನಿ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಪುಂಡಲೀಕ ಹಾಲಂಬಿ ಅವರನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಬಸವನ ಗುಡಿಯಲ್ಲಿರುವ ಶೇಖರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಹಾಲಂಬಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡ ಸಾಹಿತ್ಯ ಪರಿಷತ್ತಿನ 24ನೇ ಅಧ್ಯಕ್ಷರಾಗಿದ್ದ ಹಾಲಂಬಿ ಅವರು ಇತ್ತೀಚೆಗಷ್ಟೇ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸಿದ್ದರು. ಸಾಹಿತ್ಯ ಪರಿಷತ್ತಿನ ಚುನಾವಣೆ ಬಳಿಕ ತಮ್ಮ ಅನಾರೋಗ್ಯದಿಂದಾಗಿ ಪರಿಷತ್ತಿನ ಕಾರ್ಯಗಳಿಂದ ದೂರವುಳಿದಿದ್ದ ಹಾಲಂಬಿ ಅವರನ್ನು ಇತ್ತೀಚೆಗಷ್ಟೇ ಬಸವನಗುಡಿಯಲ್ಲಿರುವ ಶೇಖರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಹಾಲಂಬಿ ಅವರು ವಿಧಿವಶರಾಗಿದ್ದಾರೆ.
ಹಾಲಂಬಿ ಅವರ ಪಾರ್ಥೀವ ಶರೀರವನ್ನು ಅವರ ಜಯನಗರದ ನಿವಾಸಕ್ಕೆ ತೆಗೆದುಕೊಂಡು ಹೋಗಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ. ಅಲ್ಲಿಯೇ ಹಾಲಂಬಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು ಬಳಿಕ ಭಾನುವಾರ ಮಧ್ಯಾಹ್ನ ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲು ನಿರ್ಧರಿಸಲಾಗಿದೆ.
ಅಂತಿಮ ವಿಧಿವಿಧಾನದ ಕುರಿತು ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


