ಪ್ರಧಾನ ಸುದ್ದಿ

ಸಿಎಂ ಬರ ಪರಿಹಾರಕ್ಕಾರಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ನೀಡಲಿ: ಶೆಟ್ಟರ್

ರಾಜ್ಯದಲ್ಲಿ ಇಂದಿನಿಂದ ಎರಡನೇ ಸುತ್ತಿನ ಬರ ಪ್ರವಾಸ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು...

ಸಿಎಂ ಬರ ಪರಿಹಾರಕ್ಕಾರಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ನೀಡಲಿ: ಶೆಟ್ಟರ್
ಜಗದೀಶ್ ಶೆಟ್ಟರ್
Published On :
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎರಡನೇ ಸುತ್ತಿನ ಬರ ಪ್ರವಾಸ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶೆಟ್ಟರ್, ಕಳೆದ ಐದಾರು ತಿಂಗಳಿಂದ ರಾಜ್ಯದಲ್ಲಿ ಬರಗಾಲ ಇದೆ. ಕಂದಾಯ ಸಚಿವರು ವಿಭಾಗ ಮಟ್ಟದ ಸಭೆ ಮಾಡಿ ಸುಮ್ಮನಾದ್ರು. ಬಿಜೆಪಿ ಜಿಲ್ಲಾವಾರು ಪ್ರವಾಸ ಶುರು ಮಾಡುತ್ತಿದ್ದ್ದತೆ ಸಿಎಂ ಎಚ್ಚೆತ್ತುಕೊಂಡು ಪ್ರವಾಸ ಮಾಡ್ತಿದ್ದಾರೆ. ಸಿಎಂ ಹಾಗೂ ಸಚಿವರ ಪ್ರವಾಸ ಪರಿಶೀಲನೆ ಕೇವಲ ಕಾಟಾಚಾರಕ್ಕಷ್ಟೇ ನಡೆಯುತ್ತಿದೆ. ಅಧಿಕಾರಿಗಳೂ ಸಚಿವರು, ಸಿಎಂ ಎದುರಿಗೆ ಬರ ಪರಿಹಾರದ ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರ ತಕ್ಷಣ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10ಕೋಟಿ ರು. ಹಣ ನೀಡಿ, ಕೆರೆ ಹೂಳು ತೆಗೆಸಬೇಕು. ಭೀಕರ ಬರಗಾಲ ಇದ್ದರೂ ಕಂದಾಯ ಸಚಿವರು ಯಾವ ಜಿಲ್ಲೆಗೂ ಭೇಟಿ ನೀಡಲಿಲ್ಲ. ಸಂಪೂರ್ಣ ಕೆರೆ ಹೂಳೆತ್ತಲು ವಿಶೇಷ ಹಣ ಮೀಸಲಿಡಬೇಕು. ಹೈದರಾಬಾದ್ ಕರ್ನಾಟಕ ಭಾಗದ ಜನ ಗುಳೆ ಹೋಗುತ್ತಿದ್ದಾರೆ. ಅಂತವರಿಗೆ ನರೇಗಾದಲ್ಲಿ ಉದ್ಯೋಗ ಕಲ್ಪಿಸಬೇಕು. ಗುಳೇ ಹೋಗುವವರಿಗೆ ಬಸ್ ವ್ಯವಸ್ಥೆ ಮಾಡಲು ಹೊರಟಿರುವ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ಜಿಲ್ಲೆಯಲ್ಲಿ ಜನರ ಸಮಸ್ಯೆ ಆಲಿಸಲು ಕಾಲ್ ಸೆಂಟರ್ ಸ್ಥಾಪಿಸಬೇಕು. ಕೇಂದ್ರ ಸರ್ಕಾರ 1240 ಕೋಟಿ ರು. ಜೊತೆಗೆ 723 ಕೋಟಿ ರು. ಹೆಚ್ಚಿನ ಹಣ ಕೊಟ್ಟಿದೆ. ಇಷ್ಟಾದರೂ ರಾಜ್ಯ ಸರ್ಕಾರ ಕೇಂದ್ರದ ಬಗ್ಗೆ ಟೀಕೆ ಮಾಡುತ್ತಿದೆ. ಕೊಟ್ಟ ಹಣವನ್ನೇ ಸರ್ಕಾರ ಸಂಪೂರ್ಣವಾಗಿ ಬಳಸಿಕೊಂಡಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.