ಪ್ರಧಾನ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ಮತ್ತೊಂದು ದೂರು

ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮಂಗಳವಾರ ಮತ್ತೊಂದು...

ಸಿಎಂ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ಮತ್ತೊಂದು ದೂರು
ಸಿದ್ದರಾಮಯ್ಯ
Published On :
ಬೆಂಗಳೂರು: ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮಂಗಳವಾರ ಮತ್ತೊಂದು ದೂರು ದಾಖಲಾಗಿದ್ದು, ಇದರೊಂದಿಗೆ ಸಿಎಂ ವಿರುದ್ಧ ಎಸಿಬಿಗೆ ಬಂದ ನಾಲ್ಕನೇ ದೂರು ಇದಾಗಿದೆ.
ರಾಚೇನಹಳ್ಳಿ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ವಕೀಲ ನಟರಾಜ್ ಶರ್ಮಾ ಎಂಬುವರು ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತ ಶ್ಯಾಂ ಭಟ್ ವಿರುದ್ಧ ದೂರು ದಾಖಲಿಸಿದ್ದಾರೆ.
ರಾಚೇನಹಳ್ಳಿ ಡಿನೋಟಿಫಿಕೇಷನ್ ವೇಳೆ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿರುವ ನಟರಾಜ್ ಶರ್ಮಾ ಅವರು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಎಸಿಬಿಗೆ ಮನವಿ ಮಾಡಿದ್ದಾರೆ.
ಈ ಹಿಂದೆ ದುಬಾರಿ ವಾಚ್ ಪ್ರಕರಣ, ಪುತ್ರನ ಸ್ನೇಹಿತನ ಕಂಪನಿಗೆ ಹೆಬ್ವಾಳ ಬಳಿ ಭೂಮಿ ಮಂಜೂರು ಮಾಡಿದ ಪ್ರಕರಣ ಹಾಗೂ ಪುತ್ರ ಯತೀಂದ್ರಗೆ ವಿಕ್ಟೋರಿಯಾ ಆವರಣದಲ್ಲಿ ಲ್ಯಾಬ್ ಆರಂಭಕ್ಕೆ ಗುತ್ತಿಗೆ ನೀಡಿದ ಸಂಬಂಧ ಸಿಎಂ ವಿರುದ್ಧ ಎಸಿಬಿಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದವು. ಇದೀಗ ನಾಲ್ಕನೇ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.