ಪೊಲೀಸ್ ದೌರ್ಜನ್ಯಕ್ಕೆ ಹೈಕೋರ್ಟ್ ಗರಂ, ವರದಿ ನೀಡುವಂತೆ ಸರ್ಕಾರಕ್ಕೆ ಸೂಚನೆ
ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು...

Published On :
ಬೆಂಗಳೂರು: ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ವೇಳೆ ಮಹಿಳೆಯರು, ಮಕ್ಕಳು ಎನ್ನದೇ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದ ಪೊಲೀಸರ ಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ಹೈಕೋರ್ಟ್ ಸಹ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಸೂಚಿಸಿದೆ.
ಕರ್ನಾಟಕ ಬಂದ್ ವೇಳೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ ಪೊಲೀಸರು ಮಹಿಳೆಯರು ಅಬಲರ ಮೇಲೆ ಈ ರೀತಿ ವರ್ತಿಸಿದ್ದು ಪ್ರಜಾಪ್ರಭುತ್ವವೇ ಎಂದು ನ್ಯಾ ವೇಣುಗೋಪಾಲ ಗೌಡ ಅವರು ಕಟು ಶಬ್ಧಗಳಲ್ಲಿ ಪ್ರಶ್ನಿಸಿದ್ದಾರೆ.
'ಪೊಲೀಸರ ವರ್ತನೆ ಒನಕೆ ಓಬವ್ವಳಂತಿತ್ತು. ಓಬವ್ವ ರಾಜ್ಯದ ಹಿತಕ್ಕಾಗಿ ಕಿಂಡಿಯಲ್ಲಿ ನಿಂತು ವೈರಿಗಳ ಮೇಲೆ ದಾಳಿ ಮಾಡಿದಳು. ಆದರೆ ಪೊಲೀಸರು ಸುತ್ತಲು ಜೀಪುಗಳನ್ನಿಟ್ಟು ಅಮಾಯಕರನ್ನು ಸಿಲುಕಿಸಿ ಲಾಠಿ ಪ್ರಹಾರ ನಡೆಸಿದರು' ಎಂದು ನ್ಯಾಯಾಧೀಶರು ಆಕ್ರೋಶ ವ್ಯಕ್ತ ಪಡಿಸಿದರು.
ಕೇವಲ ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಿದರೆ ಸಾಲುದು ಮೇಲಿನ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.
ಅಗಸ್ಟ್ 5ರ ಒಳಗೆ ಲಾಠಿ ಪ್ರಹಾರದ ಕುರಿತಾಗಿನ ತನಿಖಾ ವರದಿಯನ್ನು ಕೋರ್ಟ್‌ಗೆ ನೀಡುವಂತೆ ಗೃಹ ಇಲಾಖೆ ಮತ್ತು ಪೊಲೀಸ್ ಪ್ರಾಧಿಕಾರಕ್ಕೆ ನ್ಯಾ ವೇಣುಗೋಪಾಲ ಗೌಡ ಅವರು ಗಡುವು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


