ಆಗಸ್ಟ್ 8 ರಂದು ಲೋಕಸಭೆಯಲ್ಲಿ ಜಿಎಸ್ ಟಿ ಮಸೂದೆ ಮಂಡನೆ: ಚರ್ಚೆಯಲ್ಲಿ ಪ್ರಧಾನಿ ಭಾಗಿ ಸಾಧ್ಯತೆ
ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವ ಜಿಎಸ್ ಟಿ ಆಗಸ್ಟ್ 8 ರಂದು (ಸೋಮವಾರ) ಲೋಕಸಭೆಯಲ್ಲಿ ಮಂಡನೆಯಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.

ನವದೆಹಲಿ: ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವ ಜಿಎಸ್ ಟಿ ಆಗಸ್ಟ್ 8 ರಂದು (ಸೋಮವಾರ) ಲೋಕಸಭೆಯಲ್ಲಿ ಮಂಡನೆಯಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.
ಸರ್ಕಾರ ಲೋಕಸಭಾ ಕಲಾಪದಲ್ಲಿ ನಡೆಸಬೇಕಿರುವ ಚರ್ಚೆಗಳ ಪಟ್ಟಿಯಲ್ಲಿ ಜಿಎಸ್ ಟಿ ಮಸೂದೆಯನ್ನೂ ಸೇರಿಸಲಾಗಿದ್ದು, ಲೋಕಸಭೆಯಲ್ಲಿ ಜಿಎಸ್ ಟಿ ಮೇಲೆ ನಡೆಯಲಿರುವ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಭಾಗಿಯಾಗುವ ಸಾಧ್ಯತೆ ಇದೆ.
ಇನ್ನು ಬಿಜೆಪಿ ತನ್ನ ಸಂಸದರಿಗೆ ಆಗಸ್ಟ್.8 ರಂದು ಲೋಕಸಭಾ ಕಲಾಪದಲ್ಲಿ ಭಾಗಿಯಾಗುವಂತೆ ಸೂಚಿಸಿ ವಿಪ್ ಜಾರಿ ಮಾಡಿದೆ. ಆಗಸ್ಟ್.3 ರಂದು ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಎಸ್ ಟಿ ಸಂಪೂರ್ಣವಾಗಿ ಜಾರಿಯಾಗುವುದಕ್ಕೆ ಈಗ ಲೋಕಸಭೆಯಲ್ಲೂ ಮಂಡನೆಯಾಗಿ, ಅಂಗೀಕಾರವಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


