ಮಹದಾಯಿ: ಸಿಎಂ ನೇತೃತ್ವದ ಸರ್ವಪಕ್ಷ ಸಭೆ, ನಾರಿಮನ್ ಜತೆ ಚರ್ಚಿಸಿ ಮುಂದಿನ ತೀರ್ಮಾನ
ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪಿನ ಕುರಿತು ಹಿರಿಯ ವಕೀಲ ಎಫ್.ಎಸ್. ನಾರಿಮನ್ ಮತ್ತು ಅವರ ಕಾನೂನು ತಂಡದೊಂದಿಗೆ ಚರ್ಚಿಸಿ...

Published On :
ಬೆಂಗಳೂರು: ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪಿನ ಕುರಿತು ಹಿರಿಯ ವಕೀಲ ಎಫ್.ಎಸ್. ನಾರಿಮನ್ ಮತ್ತು ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವ ಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ರಾಜ್ಯಕ್ಕೆ ಆಘಾತ ತಂದೊಡ್ಡಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭೇಟಿಗೆ ಸಮಯ ನೀಡದಿರುವುದರ ಬಗ್ಗೆ ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಧ್ಯಂತರ ತೀರ್ಪಿನ ಬಗ್ಗೆ ಇಂದಿನ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆದಿದೆ. ಎಲ್ಲ ಪಕ್ಷಗಳ ನಾಯಕರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ವಕೀಲ ನಾರಿಮನ್ ಮತ್ತವರ ತಂಡದೊಂದಿಗೆ ನಡೆದಿದೆ. ಮಧ್ಯಂತರ ತೀರ್ಪಿನ ಕುರಿತು ಸ್ಪಷ್ಟೀಕರಣ ಕೇಳಲು ಹಾಗೂ ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಕಾನೂನು ತಜ್ಞರ ತಂಡ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನಾರಿಮನ್ ಅವರೊಂದಿಗೆ ಆಗಸ್ಟ್ 16ರಂದು ಚರ್ಚಿಸಲು ಸಭೆ ತೀರ್ಮಾನಿಸಿದೆ ಎಂದು ಹೇಳಿದರು.
ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರತಿಪಕ್ಷಗಳ ನಾಯಕರಾದ ಜಗದೀಶ್ ಶೆಟ್ಟರ್, ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಗದಗ, ಧಾರವಾಡ, ಬೆಳಗಾವಿ ಮತ್ತು ಬಾಗಲಕೋಟ ಜಿಲ್ಲೆಯ ಉಸ್ತುವಾರಿ ಸಚಿವರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯದ ಎಲ್ಲ ಸಂಸತ್ ಸದಸ್ಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


