ಉತ್ತರಪ್ರದೇಶ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ನಿಷೇಧ ದುರದೃಷ್ಟಕರ: ಕೇಂದ್ರ ಮಂತ್ರಿ
ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ಹಾಡುವುದನ್ನು ನಿಷೇಧಿಸಿರುವುದು 'ಗಂಭೀರ' ಮತ್ತು 'ದುರದೃಷ್ಟಕರ' ಎಂದು ಮಂಗಳವಾರ ಕೇಂದ್ರ ಸರ್ಕಾರ ಹೇಳಿದೆ.

Published On :
ನವದೆಹಲಿ: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ಹಾಡುವುದನ್ನು ನಿಷೇಧಿಸಿರುವುದು 'ಗಂಭೀರ' ಮತ್ತು 'ದುರದೃಷ್ಟಕರ' ಎಂದು ಮಂಗಳವಾರ ಕೇಂದ್ರ ಸರ್ಕಾರ ಹೇಳಿದೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಕಿರಿತ್ ಸೋಮಯ್ಯ, ಶಾಲೆಯೊಂದರಲ್ಲಿ ರಾಷ್ಟ್ರಗೀತೆ ನಿಷೇದ ಗಂಭೀರ ವಿಷಯ ಎಂದಿದ್ದಲ್ಲದೆ ಇದಕ್ಕೆ ಸರ್ಕಾರದ ಪ್ರತಿಕ್ರಿಯೆಗಾಗಿ ಆಗ್ರಹಿಸಿದರು.
ಉತ್ತರ ಪ್ರದೇಶದ ಬಿಜೆಪಿ ಲೋಕಸಭಾ ಸದಸ್ಯರು ಈ ಆಗ್ರಹವನ್ನು ಬೆಂಬಲಿಸಿದರು.
ಸದಸ್ಯರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಸ್ ಎಸ್ ಅಹುಲ್ವಾಲಿಯಾ "ಈ ಪ್ರಕರಣ ಗಂಭೀರವಾದದ್ದು ಮತ್ತು ಈ ಘಟನೆ ದುರದೃಷ್ಟಕರ" ಎಂದಿದ್ದಾರೆ.
ಸಂಬಂಧ ಪಟ್ಟ ಸಚಿವರ ಬಳಿ ಈ ಪ್ರಕರಣವನ್ನು ಕೊಂಡೊಯ್ಯುವುದಾಗಿ ಅವರು ತಿಳಿಸಿದ್ದಾರೆ.
ಎಂ ಎ ಕಾನ್ವೆಂಟ್ ಶಾಲೆಯಲ್ಲಿ ಆಡಳಿತ ಮಂಡಳಿ ರಾಷ್ಟ್ರಗೀತೆ ಹಾಡುವುದನ್ನು ನಿಷೇಧಿಸಿರುವ ನಡೆಯನ್ನು ವಿರೋಧಿಸಿ ಪ್ರಾಂಶುಪಾಲರು ಮತ್ತು ಏಳು ಜನ ಶಿಕ್ಷಕರು ರಾಜೀನಾಮೆ ನೀಡಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿತ್ತು.
ಶಾಲೆಯ ವ್ಯವಸ್ಥಾಪಕರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


