ಅಮ್ನೆಸ್ಟಿ ದೇಶ ವಿರೋಧಿ ಪ್ರಕರಣ; ಕಾನೂನಿನಂತೆ ಕ್ರಮ: ಸಿಎಂ ಸಿದ್ದರಾಮಯ್ಯ
ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ದೇಶ ವಿರೋಧಿ ಘೋಷಣೆ ಪ್ರಕರಣದ ಬಗ್ಗೆ ರಾಜ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ...

Published On :
ಬೆಂಗಳೂರು: ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ದೇಶ ವಿರೋಧಿ ಘೋಷಣೆ ಪ್ರಕರಣದ ಬಗ್ಗೆ ರಾಜ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಾನೂನಿನಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ದೇಶ ವಿರೋಧಿ ಘಟನೆ ಕುರಿತು ಇಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ಕೂಡಾ ದಾಖಲಿಸಲಾಗಿದೆ. ಅಲ್ಲದೆ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಅಮ್ನೆಸ್ಟಿ ಸಂಸ್ಥೆಯಲ್ಲಿನ ದೇಶ ವಿರೋಧಿ ಘಟನೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯೇ ಇಲ್ಲಿಯೂ ಮರುಕಳುಹಿಸಿದೆ. ಆದರೆ ರಾಜ್ಯದಲ್ಲಿ ಅಂತಹ ಕೃತ್ಯಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈ ಸಂಬಂಧ ನಾನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.
ಇದೇ ವೇಳೆ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ ಎಬಿವಿಪಿ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದರು,
ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಿಶೇಷ ಕಾರ್ಯಾಗಾರದಲ್ಲಿ ಪ್ರಚೋದನಾತ್ಮಕ ಭಾಷಣ, ಆಜಾದಿ ಪರ ಘೋಷಣೆ ಮತ್ತು ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪದ ಮೇಲೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


