ಪ್ರಧಾನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ತಾಳ ತಪ್ಪುತ್ತಿರುವ ಕಾಂಗ್ರೆಸ್-ಕಮ್ಯುನಿಸ್ಟ್ ಮೈತ್ರಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಬಾರಿಗೆ ತೃಣಮೂಲ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದ ನಂತರ ಕಾಂಗ್ರೆಸ್-ಕಮ್ಯುನಿಸ್ಟರ ಮೈತ್ರಿ ಹದಗೆಡತೊಡಗಿದೆ.

ಪಶ್ಚಿಮ ಬಂಗಾಳದಲ್ಲಿ ತಾಳ ತಪ್ಪುತ್ತಿರುವ ಕಾಂಗ್ರೆಸ್-ಕಮ್ಯುನಿಸ್ಟ್ ಮೈತ್ರಿ
ಪಶ್ಚಿಮ ಬಂಗಾಳದಲ್ಲಿ ತಾಳ ತಪ್ಪುತ್ತಿರುವ ಕಾಂಗ್ರೆಸ್-ಕಮ್ಯುನಿಸ್ಟ್ ಮೈತ್ರಿ
Published On :

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಎರಡನೇ ಬಾರಿಗೆ ತೃಣಮೂಲ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದ ನಂತರ ಕಾಂಗ್ರೆಸ್-ಕಮ್ಯುನಿಸ್ಟರ ಮೈತ್ರಿ ಹದಗೆಡತೊಡಗಿದೆ.

ವಿಧಾನಸಭಾ ಚುನಾವಣಾ ನಡೆದ ನಂತರ ರಾಜ್ಯದ ಹಲವು ಪಂಚಾಯತ್ ಗಳಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದಿಂದ ಅಧಿಕಾರ ಕಸಿಯುವಲ್ಲಿ ಯಶಸ್ವಿಯಾಗಿದೆ. ಕೌನ್ಸಿಲರ್ ಗಳು ಹಾಗೂ ಪಂಚಾಯತ್ ಸದಸ್ಯರು ಕಾಂಗ್ರೆಸ್ ಅಥವಾ ಸಿಪಿಐ(ಎಂ) ಪಕ್ಷದಿಂದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

ಪಂಚಾಯತ್ ಸದಸ್ಯರು ಮಾತ್ರವಲ್ಲದೇ, ಇತ್ತೀಚೆಗಷ್ಟೇ ಕಾಂಗ್ರೆಸ್ ನಿಂದ ಓರ್ವ ಶಾಸಕ, ಸಿಪಿಐ(ಎಂ) ಪಕ್ಷದ ಓರ್ವ ಶಾಸಕ ಸಹ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಪಶ್ಚಿಮ ಬಂಗಾಳ ವಿಧಾನಸಭಾಹಿಯಲ್ಲೀಗ ವಿರೋಧ ಪಕ್ಷದ ಸದಸ್ಯರ ಬಲ 76 ರಿಂದ 74 ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.