ನಿಮ್ಮನ್ನು ಸಹೋದರ ಎಂದು ಪರಿಗಣಿಸಿದ್ದೇನೆ- ಮೋದಿಗೆ ಬಲೋಚಿಸ್ತಾನ ಮಹಿಳೆ ಟ್ವೀಟ್
ರಕ್ಷಾ ಬಂಧನವಾದ ಗುರುವಾರದಂದು ಬಲೋಚಿಸ್ತಾನದ ಬಲೋಚ್ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಕರಿಮಾ ಬಲೋಚ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ನವದೆಹಲಿ: ರಕ್ಷಾ ಬಂಧನವಾದ ಗುರುವಾರದಂದು ಬಲೋಚಿಸ್ತಾನದ ಬಲೋಚ್ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಕರಿಮಾ ಬಲೋಚ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ತಿಳಿಸಿ, ನಿಮ್ಮನ್ನು ನಮ್ಮ ಸಹೋದರ ಎಂದು ಭಾವಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಬಲೋಚಿಸ್ತಾನದಲ್ಲಿ ನಡೆಯುತ್ತಿರುವ ನರಮೇಧ, ಯುದ್ದಪರಾಧ, ಮಾನವ ಹಕ್ಕುಗಳ ಉಲ್ಲಂಘನೆಯಂತಹ ಅಪರಾಧಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದನಿಯೆತ್ತಬೆಕು ಎಂದು ಟ್ವೀಟ್ ಮಾಡಿದ್ದಾರೆ.
ರಕ್ಷ ಬಂಧನವಾದ ಈ ದಿನದಂದು ನಿಮ್ಮನ್ನು ನನ್ನ ಸಹೋದರ ಎಂದು ಭಾವಿಸಿ ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡುತ್ತಿದ್ದೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ಸಮಸ್ಯೆಗಳ ಬಗ್ಗೆ ದನಿಯೆತ್ತಿ, ಇಲ್ಲಿಂದ ಕಾಣೆಯಾಗಿರುವ ಸಹೋದರ ಹಾಗೂ ಸಹೋದರಿಯರನ್ನು ಪತ್ತೆ ಹಚ್ಚಲು ಸಹಾಯ ಮಾಡಬೇಕೆಂದು ವಿಡಿಯೋದಲ್ಲಿ ಹೇಳಿದ್ದಾರೆ.
ಆಗಸ್ಟ್ 15ರ ಸ್ವತಂತ್ರ್ಯ ದಿನಾಚರಣೆ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಬಲೋಚಿಸ್ತಾನ ಸ್ವಾತಂತ್ರ್ಯಕ್ಕೆ ತಮ್ಮ ಬೆಂಬಲ ನೀಡುವುದಾಗಿ ಘೋಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


