ಮಹದಾಯಿ ನ್ಯಾಯಾಧಿಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ
ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Published On :
ನವದೆಹಲಿ: ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನ್ಯಾಯಾಧಿಕರರಣದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.
ಕರ್ನಾಟಕ ಪರ ವಕೀಲ ಫಾಲಿ ಎಸ್. ನಾರಿಮನ್ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ. ಪಾಟೀಲ್ ಅವರು, ಹಿರಿಯ ವಕೀಲ ನಾರಿಮನ್ ಸಲಹೆಯಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಆದರೆ ನ್ಯಾಯಾಧಿಕರಣ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿ ರಾಜ್ಯದ ಅರ್ಜಿಯನ್ನು ವಜಾಗೊಳಿಸಿತ್ತು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


