ಪಿವಿ ಸಿಂಧು ಸಾಧನೆಗೆ ಉಗಿಯಬೇಕು ಎನಿಸುತ್ತಿದೆ: ಮಲಯಾಳಂ ಚಿತ್ರ ನಿರ್ದೇಶಕ
ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿರುವ ಪಿವಿ ಸಿಂಧು ಸಾಧನೆಯನ್ನು ಇಡೀ ದೇಶವೇ ಕೊಂಡಾಡಿ, ಸಂಭ್ರಮಿಸುತ್ತಿದೆ. ಆದರೆ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕರೊಬ್ಬರು ಪಿ ವಿ ಸಿಂಧು

ನವದೆಹಲಿ: ರಿಯೋ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿರುವ ಪಿವಿ ಸಿಂಧು ಅವರ ಸಾಧನೆಯನ್ನು ಇಡೀ ದೇಶವೇ ಕೊಂಡಾಡಿ, ಸಂಭ್ರಮಿಸುತ್ತಿದೆ.
ಆದರೆ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕರೊಬ್ಬರು ಪಿ ವಿ ಸಿಂಧು ಅವರ ಸಾಧನೆ ಬಗ್ಗೆ ಅವಹೇಳನ ಮಾಡಿದ್ದಾರೆ.
ಓಝಿವೂ ದಿವಾಸತೇ ಕಲಿ ಮಲಯಾಳಂ ಚಿತ್ರದ ನಿರ್ದೇಶಕ ಸನಲ್ ಕುಮಾರ್ ಸರ್ದೇಶಿಯಾ ತಮ್ಮ ಫೇಸ್ ಬುಕ್ ನಲ್ಲಿ , ಸಿಂಧು ಅವರ ಸಾಧನೆ ಬಗ್ಗೆ ತೀರಾ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ.
ಎಲ್ಲರೂ ಸಿಂಧು ಅವರ ಸಾಧನೆಯನ್ನು ಸಂಭ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ, ಒಂದು ವೇಳೆ ನಾನು ಅವರ ರಿಯೋ ಒಲಂಪಿಕ್ಸ್ ಸಾಧನೆಗೆ ಉಗಿದರೇ ಎಂದು ಪೋಸ್ಟ್ ಹಾಕಿದ್ದಾರೆ. ಸಂಭ್ರಮಿಸುವುದಕ್ಕೆ ಏನಿದೆ ಎಂದು ಪ್ರಶ್ನಿಸಿದ್ದಾರೆ.
ನಿರ್ದೇಶಕನ ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಿಂಧು ಅಭಿಮಾನಿಗಳು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.
ನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಎಲ್ಲರು ತನ್ನ ಪೋಸ್ಟ್ ಅನ್ನು ತಪ್ಪಾಗಿ ಅರ್ಥೈಸಿದ್ದಾರೆ. ನಾನು ಅದನ್ನು ತಮಾಷೆಗಾಗಿ ಹೇಳಿದ್ದು ಎಂದು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


