ಪ್ರಧಾನ ಸುದ್ದಿ

ಉತ್ತರ ಪ್ರದೇಶ ವಿಧಾನಸಭೆಯಿಂದ ವಿರೋಧ ಪಕ್ಷದ ಶಾಸಕರನ್ನು ಹೊರದಬ್ಬಿದ ಮಾರ್ಷಲ್ ಗಳು

ಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ.

ಉತ್ತರ ಪ್ರದೇಶ ವಿಧಾನಸಭೆಯಿಂದ ವಿರೋಧ ಪಕ್ಷದ ಶಾಸಕರನ್ನು ಹೊರದಬ್ಬಿದ ಮಾರ್ಷಲ್ ಗಳು
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್
Published On :
ಲಖನೌ: ಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ. 
ವಿಧಾನಸಭೆಯ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ವಿರೋಧ ಪಕ್ಷಗಳ ಶಾಸಕರು ಸರ್ಕಾರ ವಿರೋಧಿ ಬ್ಯಾನರ್ ಗಳನ್ನು ಪ್ರದರ್ಶಿಸಿ, ಬುಲಂದ್ಶಹರ್ ನಲ್ಲಿ ನಡೆದ ಇತ್ತೀಚಿನ ರೇಪ್ ವಿರುದ್ಧ, ಅಪರಾಧಗಳು ಹೆಚ್ಚುತ್ತಿರುವ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ, ದಲಿತರ ಮೇಲೆ ದೌರ್ಜನ್ಯಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. 
ವಿಧಾನಸಭೆಯಿಂದ ಶಾಸಕರನ್ನು ಹೊರಹಾಕಲು ಮಾರ್ಷಲ್ ಗಳಿಗೆ ಆದೇಶ ನೀಡಲಾಯಿತು. ಈಗ ಶಾಸಕರು ವಿಧಾನಸಭೆಯ ಗ್ಯಾಲರಿಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. 
ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಧ್ಯಾಹ್ನ 25000 ಕೋಟಿಯ ಪೂರಕ ಬಜೆಟ್ ಅನ್ನು ಮಂಡಿಸಲಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.