ಪ್ರಧಾನ ಸುದ್ದಿ

ಕಾವೇರಿ ನೀರಿಗಾಗಿ ತಮಿಳುನಾಡು ಪಟ್ಟು, ಉಭಯ ಸದನ ನಾಯಕರ ಸಭೆ ಕರೆದ ಸಿಎಂ

ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸರ್ಕಾರ ರಾಜ್ಯದ ಮೇಲೆ ತೀವ್ರ ಒತ್ತಡ ಹೇರುತ್ತಿದ್ದು, ಈ ಬಗ್ಗೆ ರ್ಚಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಾವೇರಿ ನೀರಿಗಾಗಿ ತಮಿಳುನಾಡು ಪಟ್ಟು, ಉಭಯ ಸದನ ನಾಯಕರ ಸಭೆ ಕರೆದ ಸಿಎಂ
ಸಿದ್ದರಾಮಯ್ಯ
Published On :
ಬೆಂಗಳೂರು: ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸರ್ಕಾರ ರಾಜ್ಯದ ಮೇಲೆ ತೀವ್ರ ಒತ್ತಡ ಹೇರುತ್ತಿದ್ದು, ಈ ಬಗ್ಗೆ ರ್ಚಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27ರಂದು ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಕರೆದಿದ್ದಾರೆ.
ಆ.27ರಂದು ಬೆಳಗ್ಗೆ 11.30ಕ್ಕೆ ನಿಗದಿಯಾಗಿರುವ ಈ ಸಭೆಯಲ್ಲಿ ವಿಧಾನ ಮಂಡಲ ಉಭಯ ಸದನಗಳ ನಾಯಕರು, ಕೇಂದ್ರದ ಸಚಿವರು, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಗೆ ಬರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.
ಸಾಂಬಾ ಬೆಳೆಗೆ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಒತ್ತಾಯಿಸುತ್ತಿದೆ. ಆದರೆ, ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹವಾಗದೆ ಸಂಕಷ್ಟ ಉಂಟಾಗಿದೆ. ಜೊತೆಗೆ ಆ ಭಾಗದ ರೈತರೂ ತೊಂದರೆಗೆ ಒಳಗಾಗಿದ್ದಾರೆ. ಇವೆಲ್ಲದರ ಬಗ್ಗೆ ರ್ಚಚಿಸುವ ನಿಟ್ಟಿನಲ್ಲಿ ಸಿಎಂ ಸಭೆ ಕರೆದಿದ್ದಾರೆ ಎಂದು ಹೇಳಲಾಗಿದೆ.
ಕಾವೇರಿ ನೀರಿಗಾಗಿ ತಮಿಳುನಾಡು ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಾಕಿ ಉಳಿದಿರುವ 50.52 ಟಿಎಂಸಿ ನೀರು ಬಿಡುವಂತೆ ಮನವಿ ಮಾಡಿದೆ. ಕಾವೇರಿ ನ್ಯಾಯಮಂಡಳಿಯ ಅಂತಿಮ ಆದೇಶದ ಪ್ರಕಾರ ತಮಿಳುನಾಡಿಗೆ ಬಿಡಬೇಕಾದ ನೀರನ್ನು ಬಿಡುವ ಅನಿವಾರ್ಯತೆಗೆ ರಾಜ್ಯ ಸರ್ಕಾರ ಸಿಲುಕಿದೆ. ಒಂದು ನೀರು ಹರಿಸದಿದ್ದರೆ ನ್ಯಾಯಾಲಯದಲ್ಲಿ ಸಂಕಷ್ಟ ಎದುರಿಸಬೇಕಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.