ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿಯಿಂದ ಮಾಜಿ ಸಚಿವ ಜಾರ್ಜ್ ವಿಚಾರಣೆ
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ...

Published On :
ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ಶುಕ್ರವಾರ ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದೆ.
ಬೆಂಗಳೂರಿನ ಚಾಲುಕ್ಯ ವೃತ್ತದ ಬಳಿ ಇರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಯಿಂದ ಜಾರ್ಜ್ ವಿಚಾರಣೆ ನಡೆಸಲಾಗುತ್ತಿದೆ. ಎಡಿಜಿಪಿ ಸಿ.ಎಚ್. ಪ್ರತಾಪ್ ರೆಡ್ಡಿ ನೇತೃತ್ವದ ತಂಡ ಮಾಜಿ ಸಚಿವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಐಜಿಪಿ ಹೇಮಂತ್ ನಿಂಬಾಳ್ಕರ್ ಅವರು ವಿಚಾರಣೆ ವೇಳೆ ಉಪಸ್ಥಿತರಿದ್ದಾರೆ ಎನ್ನಲಾಗಿದೆ.
ಮಂಗಳೂರು ಡಿವೈಎಸ್ಪಿ ಗಣಪತಿಯವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಖಾಸಗಿ ವಾಹನಿಯೊಂದಕ್ಕೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ನನಗೇನಾದರೂ ಆದರೆ ಕೆ.ಜೆ.ಜಾರ್ಜ್, ಎಡಿಜಿಪಿ ಎ.ಎಂ. ಪ್ರಸಾದ್ ಮತ್ತು ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿಯವರೇ ನೇರಹೊಣೆಯಾಗಿರುತ್ತಾರೆಂದು ಹೇಳಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ಸಾಕಷ್ಟು ವಿವಾದ ಹಾಗೂ ಚರ್ಚೆಯನ್ನು ಹುಟ್ಟುಹಾಕಿತ್ತು. ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.
ನಂತರ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಕೆ.ಜೆ.ಜಾರ್ಜ್ ಅವರಿಂದ ರಾಜಿನಾಮೆ ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


